ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಪೈಪ್‍ಲೈನ್ ದುರಸ್ಥಿ ಕೆಲಸವನ್ನು ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಆಗಸ್ಟ್ 25ರಂದು ಸ್ಥಗಿತಗೊಳಿಸಲಾಗುವುದು.
ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ ಹಾಗೂ ನೀರನ್ನು ಕುದಿಸಿ, ಆರಿಸಿ, ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.