ಬಳ್ಳಾರಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಡಿ ಬರುವ ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನದಲ್ಲಿ ಆ.16 ರಂದು ವರಮಹಾಲಕ್ಷ್ಮಿವರಮಹಾಲಕ್ಷ್ಮಿ ಹಬ್ಬ ಆಚರಿಸಲಾಗುತ್ತಿದ್ದು, ದೇವಿಗೆ ಬಂಗಾರದ ಆಭರಣಗಳಿಂದ ಅಲಂಕಾರ ಮಾಡಲಾಗುವುದು. ಸಾರ್ವಜನಿಕರು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ತಿಳಿಸಿದ್ದಾರೆ.