Friday, April 18, 2025
Google search engine

Homeರಾಜ್ಯವರುಣಾರ್ಭಟ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಟ್ರೆಕ್ಕಿಂಗ್ ನಿಷೇಧ

ವರುಣಾರ್ಭಟ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಟ್ರೆಕ್ಕಿಂಗ್ ನಿಷೇಧ

ದಕ್ಷಿಣ ಕನ್ನಡ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಸಿದ್ದಾನೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಗಿರಿಶಿಖರಗಳ ಚಾರಣ ನಿಷೇಧಿಸಿ ಆದೇಶ

ಭಾರಿ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಅದರಂತೆ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲೂ ನಿರ್ಬಂಧಿಸಿಲಾಗಿದೆ. ಇನ್ನು ಆದೇಶ ಉಲ್ಲಂಘಿಸಿದ್ರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಲಾಗಿದೆ.

RELATED ARTICLES
- Advertisment -
Google search engine

Most Popular