ಪಿರಿಯಾಪಟ್ಟಣ: ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಬಿದ್ದ ಭಾರಿ ಮಳೆಗೆ ಮನೆಗಳ ಒಳಗೆ ನೀರು ತುಂಬಿ ಅಪಾರ ಪ್ರಮಾಣದ ನಾಶ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ತಗ್ಗು ಪ್ರದೇಶದಲ್ಲಿ ಇರುವ ಮನೆಗಳಿಗೆ ನುಗ್ಗಿದ ಮಳೆ ನೀರು ಭಾರಿ ಪ್ರಮಾಣದಲ್ಲಿ ಅನಾಹುತ ಸೃಷ್ಟಿ ಮಾಡಿದ್ದು ಪಟ್ಟಣದ ರುದ್ರಪ್ಪ ಬಡಾವಣೆ ಶಿವಪ್ಪ ಬಡಾವಣೆ ಚತ್ರದ ಬೀದಿ ಸೇರಿದಂತೆ ಅನೇಕ ತಗ್ಗು ಪ್ರದೇಶದ ಮನೆಗಳಿಗೆ ಬಾರಿ ಪ್ರಮಾಣದ ಮಳೆ ನೀರು ನುಗ್ಗಿ ಮನೆಯ ಪಾತ್ರೆ ಸೇರಿ ಹಲವು ವಸ್ತು ಮಳೆ ನೀರಿನೊಂದಿಗೆ ಕೊಚ್ಚಿ ಹೋಗಿವೆ.
ಛತ್ರದ ಬೀದಿ ನಿವಾಸಿ ರಾಮಕೃಷ್ಣ ಎಂಬುವರ ಮನೆಗೆ ಮಳೆ ನೀರು ನುಗ್ಗಿದ ಪರಿಣಾಮ ಸಿಲೆಂಡರ್ ಸೇರಿ ಪಾತ್ರೆ ಕೊಚ್ಚಿ ಹೋಗಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ, ಛತ್ರದ ಬೀದಿಯಲ್ಲಿರುವ ಕುಂಬಾರಕಟ್ಟೆಯಲ್ಲಿ ಪ್ರತಿ ವರ್ಷ ಮಳೆ ನೀರು ಹರಿದು ಅಕ್ಕಪಕ್ಕದ ಮನೆಗಳಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿ ಹಾನಿಯಾಗುತ್ತಿದ್ದರೂ ಸಹ ಇದರ ಬಗ್ಗೆ ಜನಪ್ರತಿನಿಧಿಗಳಾಗಲಿ ಅಧಿಕಾರಿಗಳಾಗಲಿ ಗಮನ ಹರಿಸುತ್ತಿಲ್ಲ, ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿನ ನಿವಾಸಿಗಳು ಬಾರಿ ಸಂಕಷ್ಟ ಅನುಭವಿಸುತ್ತಿದ್ದಾರೆ ಇದರಿಂದ ಜೀವ ಹಾನಿಯಾದರೆ ಯಾರು ಹೊಣೆ ಎಂದು ಸ್ಥಳೀಯ ನಿವಾಸಿ ಪುಟ್ಟರಾಜು ಅಧಿಕಾರಿ ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಸಮಸ್ಯೆ ಶೀಘ್ರ ಬಗೆಹರಿಸದಿದ್ದಲ್ಲಿ ನಿವಾಸಿಗಳೊಂದಿಗೆ ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ.
