Monday, April 7, 2025
Google search engine

HomeUncategorizedರಾಷ್ಟ್ರೀಯಪುಣೆಯಲ್ಲಿ ವರುಣನ ಅಬ್ಬರ, ನಾಲ್ವರು ಸಾವು: ರೆಡ್‌ ಅಲರ್ಟ್‌ ಘೋಷಣೆ

ಪುಣೆಯಲ್ಲಿ ವರುಣನ ಅಬ್ಬರ, ನಾಲ್ವರು ಸಾವು: ರೆಡ್‌ ಅಲರ್ಟ್‌ ಘೋಷಣೆ

ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶದ ನೂರಾರು ಮನೆಗಳು ಜಲಾವೃತವಾಗಿವೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಮಳೆ ಸಂಬಂಧಿತ ಅವಘಡಗಳಿಂದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಹವಾಮಾನ ಇಲಾಖೆ ಪುಣೆಯಾದ್ಯಂತ ಮುಂದಿನ 24 ಗಂಟೆಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಸೂಚನೆ ನೀಡಿದೆ.

ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪುಣೆ ಸುತ್ತಮುತ್ತಲಿನ ತಾಲ್ಲೂಕುಗಳಲ್ಲಿರುವ ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತದೆ. ಖಡಕ್‌ವಾಸ್ಲಾ ಜಲಾಶಯದಲ್ಲಿಯೂ ನೀರಿನ ಮಟ್ಟ ಏರಿಕೆಯಾಗಿದ್ದು ಈಗಾಗಲೇ 35,000 ಕ್ಯುಸೆಕ್‌ಗಿಂತ ಹೆಚ್ಚು ನೀರು ಬಿಡಲಾಗುತ್ತಿದೆ.

ಮಳೆಯಿಂದಾಗಿ ನೀರಿನ ಮಟ್ಟ ಇನ್ನಷ್ಟು ಹೆಚ್ಚಳವಾಗುತ್ತಿರುವ ಕಾರಣ ನದಿಗೆ ಬಿಡುವ ನೀರಿನ ಪ್ರಮಾಣ 45,000 ಕ್ಯೂಸೆಕ್‌ಗೆ ಹೆಚ್ಚಲಿದೆ. ಇದರಿಂದಾಗಿ ಇನ್ನಷ್ಟು ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಇದ್ದು, ಜನರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪುಣೆ ಮಹಾನಗರ ಪಾಲಿಕೆ ಹೇಳಿದೆ.

ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ಮತ್ತು ಗುರುವಾರ ರಾಯಗಢ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ ಮತ್ತು ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕುಂಡಲಿಕಾ, ಅಂಬಾ, ಸಾವಿತ್ರಿ ಸೇರಿದಂತೆ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೈನಂದಿನ ಜೀವನದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಲ್ಘರ್‌ನಲ್ಲಿ, ಭಾರೀ ಮಳೆಯ ಹಿನ್ನೆಲೆಯಲ್ಲಿ ವಾಡಾ ಮತ್ತು ವಿಕ್ರಮಗಡ ತಾಲೂಕಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಗೋವಿಂದ್ ಬೋಡ್ಕೆ ಆದೇಶ ಹೊರಡಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular