Saturday, April 19, 2025
Google search engine

Homeರಾಜ್ಯಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ವೀರಪ್ಪನ್ ಪುತ್ರಿ ವಿದ್ಯಾರಾಣಿ ಸ್ಪರ್ಧೆ

ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ವೀರಪ್ಪನ್ ಪುತ್ರಿ ವಿದ್ಯಾರಾಣಿ ಸ್ಪರ್ಧೆ

ಚೆನ್ನೈ: ತಮಿಳುನಾಡು ಹಾಗೂ ಕರ್ನಾಟಕದ ಭಾಗಗಳಲ್ಲಿ ಭೀತಿ ಮೂಡಿಸಿದ್ದ ದಂತಚೋರ ವೀರಪ್ಪನ್ ಅವರ ಪುತ್ರಿ ವಿದ್ಯಾರಾಣಿ ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ವೃತ್ತಿಯಲ್ಲಿ ವಕೀಲೆಯಾಗಿರುವ ವಿದ್ಯಾ ರಾಣಿ, ಜುಲೈ ೨೦೨೦ರಲ್ಲಿ ಬಿಜೆಪಿಯನ್ನು ಸೇರ್ಪಡೆಯಾಗಿದ್ದರು ಮತ್ತು ಅವರನ್ನು ರಾಜ್ಯ ಬಿಜೆಪಿ ಯುವ ಘಟಕದ ಉಪಾಧ್ಯಕ್ಷೆಯನ್ನಾಗಿ ನೇಮಿಸಲಾಗಿತ್ತು. ಆದರೆ, ಕೇಸರಿ ಪಕ್ಷವನ್ನು ತೊರೆದಿದ್ದ ವಿದ್ಯಾ ರಾಣಿ, ಇತ್ತೀಚೆಗೆ ನಟ, ನಿರ್ದೇಶಕ ಸೀಮನ್ ನೇತೃತ್ವದ ನಾಮ್ ತಮಿಳರ್ ಕಚ್ಚಿ ಪಕ್ಷವನ್ನು ಸೇರ್ಪಡೆಯಾಗಿದ್ದರು.
ಸಾರ್ವಜನಿಕ ಸಭೆಯೊಂದರಲ್ಲಿ ತಮಿಳುನಾಡು ಮತ್ತು ಪುದುಚೇರಿಯಿಂದ ಸ್ಪರ್ಧಿಸುತ್ತಿರುವ ಎಲ್ಲ ೪೦ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಸೀಮನ್, ಕೃಷ್ಣಗಿರಿ ಲೋಕಸಭಾ ಕ್ಷೇತ್ರದಿಂದ ನಾಮ್ ತಮಿಳರ್ ಕಚ್ಚಿ ಪಕ್ಷದ ಅಭ್ಯರ್ಥಿಯಾಗಿ ವಿದ್ಯಾ ರಾಣಿ ಸ್ಪರ್ಧಿಸಲಿದ್ದಾರೆ ಎಂದು ಪ್ರಕಟಿಸಿದರು.

RELATED ARTICLES
- Advertisment -
Google search engine

Most Popular