Friday, April 11, 2025
Google search engine

Homeಸಿನಿಮಾಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ 'ವೆಂಕ್ಯಾ' ಸಿನಿಮಾ ಆಯ್ಕೆ

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ವೆಂಕ್ಯಾ’ ಸಿನಿಮಾ ಆಯ್ಕೆ

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ ‘ವೆಂಕ್ಯಾ’ ಸಿನಿಮಾ ಆಯ್ಕೆಯಾಗಿದೆ. ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವು ನವೆಂಬರ್ 20ರಿಂದ 28ರ ತನಕ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಕಲಾವಿದರು ಭಾಗಿಯಾಗಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ‘ವೆಂಕ್ಯಾ’ ಪ್ರದರ್ಶನ ಕಾಣಲಿವೆ.

‘ಡೊಳ್ಳು’ ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಹಾಗೂ ಸಾಗರ್ ಪುರಾಣಿಕ್ ಕಾಂಬಿನೇಷನ್‌ನಲ್ಲಿ ‘ವೆಂಕ್ಯಾ’ ಚಿತ್ರ ಮೂಡಿ ಬಂದಿದೆ. ‘ವೆಂಕ್ಯಾ’ ಸಿನಿಮಾಗೆ ಸಾಗರ್ ಪುರಾಣಿಕ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಸಾಗರ್ ಗೆ ಜೋಡಿಯಾಗಿ ಶಿಮ್ಲಾದ ರೂಪಾಲಿ ಸೂದ್ ಅಭಿನಯಿಸಿದ್ದಾರೆ.

ಉತ್ತರ ಕರ್ನಾಟಕ ಕಥೆಯಾಧಾರಿಸಿತ ‘ವೆಂಕ್ಯಾ’ ಸಿನಿಮಾವನ್ನು ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ನಿರ್ಮಾಣ ಮಾಡುತ್ತಿದ್ದಾರೆ. ಪವನ್ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ.

ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಭಾರತೀಯ ಪನೋರಮಾ’ ವಿಭಾಗ ಪ್ರಮುಖವಾಗಿದೆ. ಇದರಲ್ಲಿ 25 ಕಥಾಚಿತ್ರ ಹಾಗೂ 20 ನಾನ್-ಫೀಚರ್ ಸಿನಿಮಾಗಳು ಪ್ರದರ್ಶನಕ್ಕೆ ಆಯ್ಕೆ ಆಗಿದೆ. ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ ಬಾಲಿವುಡ್‌ನ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಸಿನಿಮಾ ಪ್ರದರ್ಶನ ಆಗಲಿದೆ. ಎರಡನೇ ಸಿನಿಮಾವಾಗಿ ಕನ್ನಡದ ‘ಕೆರೆಬೇಟೆ’ ಆಯ್ಕೆ ಆಗಿದೆ. ಆಯ್ಕೆದಾದ ಸಿನಿಮಾಗಳ ಪಟ್ಟಿಯ 3ನೇ ಸ್ಥಾನದಲ್ಲಿ ಕನ್ನಡದ ‘ವೆಂಕ್ಯಾ’ ಚಿತ್ರವಿದೆ. ಭಾರತದ ಜನಪ್ರಿಯ ಸಿನಿಮಾಗಳನ್ನು ಕೂಡ ಆಯ್ಕೆ ಮಾಡಲಾಗಿದೆ. ಮಲಯಾಳ, ತಮಿಳು, ಮರಾಠಿ, ಬೆಂಗಾಲಿ, ತೆಲುಗು ಭಾಷೆಯ ಸಿನಿಮಾಗಳು ಪ್ರದರ್ಶನ ಕಾಣಲಿವೆ.

RELATED ARTICLES
- Advertisment -
Google search engine

Most Popular