ಮಂಡ್ಯ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಪಿ.ಸಿ ಜಾಫರ್ ರವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಕೆಲಸಗಳನ್ನು ಪರಿಶೀಲನೆ ಮಾಡಿದರು. ಜಿಲ್ಲೆಯಲ್ಲಿ ಅಕ್ಟೋಬರ್ 27 ರಿಂದ ಡಿಸೆಂಬರ್ 09 ರವರಿಗೆ ನಮೂನೆ -6 ರಲ್ಲಿ 8.664, ನಮೂನೆ -7 ರಲ್ಲಿ 8.978, ನಮೂನೆ -8 ರಲ್ಲಿ 8.788, ಒಟ್ಟು 26.430 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು ಅಂತಿಮ ಮತದಾರರ ಪಟ್ಟಿಯನ್ನು ಜನವರಿ 05 ರಂದು ಪ್ರಕಟಿಸಲಾಗುವುದು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವಿರ್ ಆಸೀಫ್, ಪಾಂಡವಪುರ ಉಪವಿಭಾಗಾಧಿಕಾರಿ ನಂದೀಶ್, ಚುನಾವಣಾ ತಹಶೀಲ್ದಾರ್ ವೆಂಕಟಚಲಪತಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.