Tuesday, April 15, 2025
Google search engine

Homeಸಿನಿಮಾಹಿರಿಯ ನಟ ಬ್ಯಾಂಕ್ ಜನಾರ್ದನ್ ನಿಧನ : ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ...

ಹಿರಿಯ ನಟ ಬ್ಯಾಂಕ್ ಜನಾರ್ದನ್ ನಿಧನ : ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಬ್ಯಾಂಕ್ ಜನಾರ್ದನ್ (76) ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇಂದು ಬೆಳಗ್ಗೆ 10.30 ರಿಂದ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಬ್ಯಾಂಕ್ ಜನಾರ್ದನ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಸುಲ್ತಾನ್ ಪಾಳ್ಯದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 5 ಗಂಟೆಯ ವೇಳೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

1948ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ ಕನ್ನಡ ಚಿತ್ರರಂಗದ ಹಿರಿಯ ನಟ. ಬೆಂಗಳೂರಿನಲ್ಲಿಯೇ. ತಮ್ಮ ಶಿಕ್ಷಣ ಪೂರ್ಣಗೊಳಿಸಿದ್ದಾರೆ. 1991ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದರು.

ಉಪೇಂದ್ರ ನಿರ್ದೇಶನದ ‘ಶ್’, ‘ತರ್ಲೆ ನನ್ ಮಗ’ ಹಾಗೂ ‘ಕೌರವ’ ಸೇರಿದಂತೆ ಹಲವು ಸಿನಿಮಾಗಳು ಸೇರಿದಂತೆ ಈವೆರೆಗೂ 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಮಾತ್ರವಲ್ಲದೇ ಕಿರುತೆರೆ ಮತ್ತು ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ, ಹಾಸ್ಯ ನಟರಾಗಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ.

RELATED ARTICLES
- Advertisment -
Google search engine

Most Popular