ಚೆನ್ನೈ : ಸಿ.ಐ.ಡಿ.ಶಕುಂತಲಾ ಎಂದೇ ಜನಪ್ರಿಯರಾಗಿದ್ದ ಕನ್ನಡ, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಖ್ಯಾತ ಹಿರಿಯ ನಟಿ ಎ.ಶಕುಂತಲಾ (೮೪) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ನಟಿ ಎ.ಶಕುಂತಲಾ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನೃತ್ಯಗಾರ್ತಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಶಕುಂತಲಾ ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಚಲನಚಿತ್ರಗಳಲ್ಲಿ ೬೦೦ ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
ತಮಿಳಿನ ನೇತಾಜಿ (೧೯೯೬), ನಾನ್ ವನಂಗುಮ್ ದೈವಂ (೧೯೬೩), ಮತ್ತು ಕೈ ಕೊಡುತ ದೈವಂ (೧೯೬೪) ಸೇರಿದಂತೆ ೬೦೦ ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಶಕುಂತಲಾ ನಟಿಸಿದ್ದಾರೆ. ಅವರಿಗೆ ಹಲವಾರು ಪ್ರಶಸ್ತಿಗಳು ಲಭಿಸಿದ್ದು, ಬೆಂಗಳೂರಿನಲ್ಲೇ ವಾಸವಾಗಿದ್ದರು.