ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕೇವಲ ಒಂದು ತಿಂಗಳಾಗಿತ್ತಷ್ಟೇ ಇಂದು ಅನಾರೋಗ್ಯದ ಕಾರಣ ಮತ್ತೆ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ೯೬ ವರ್ಷದ ಅಡ್ವಾಣಿಯವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ. ಅವರನ್ನು ನರರೋಗ ತಜ್ಞ ಡಾ. ವಿನಿತ್ ಅವರು ನೋಡಿಕೊಳ್ಳುತ್ತಿದ್ದಾರೆ.