Wednesday, September 24, 2025
Google search engine

Homeರಾಜ್ಯಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ

ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಇನ್ನಿಲ್ಲ

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಹಿರಿಯ ಸಾಹಿತಿ, ಪ್ರಸಿದ್ಧ ಕಾದಂಬರಿಕಾರ ಎಸ್‍.ಎಲ್ ಭೈರಪ್ಪ ವಿಧಿವಶರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

94 ವರ್ಷ ವಯಸ್ಸಿನ ಪದ್ಮಭೂಷಣ ಪುರಸ್ಕೃತರಾದ ಹಿರಿಯ ಸಾಹಿತಿ ಬೆಂಗಳೂರಿನ ರಾಜ ರಾಜೇಶ್ವರಿ ನಗರದಲ್ಲಿರುವ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪರ್ವ, ವಂಶವೃಕ್ಷ, ಯಾನ,  ಗೃಹಭಂಗ, ದಾಟು, ತಬ್ಬಲಿಯು ನೀನಾದೆ ಮಗನೇ,  ಸೇರಿ ಹಲವಾರು ಹೆಸರಾಂತ ಕಾದಂಬರಿಗಳನ್ನ ಬರೆದಿದ್ದಾರೆ. ಇನ್ನು ದಾಟು ಕೃತಿಗೆ 1975ರಲ್ಲಿ ಕೇಂದ್ರ ಹಾಗೂ ರಾಜ್ಯ ಆಕಾಡಮಿ ಪ್ರಶಸ್ತಿ ದೊರೆದಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ಆಗಸ್ಟ್‌ 20, 1931 ಜನಿಸಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ”, ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದ್ದಾರೆ.

ಆಯಾ ಕಾಲದಲ್ಲಿ ಬಂದ ಅವರ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದಗೊಂಡಿವೆ. ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ.

RELATED ARTICLES
- Advertisment -
Google search engine

Most Popular