ಶಿವಮೊಗ್ಗ: ಸಾಗರದ ಹಕ್ರೆ ಬಳಿಯ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಪಶು ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ.
ಮೃತರನ್ನು ಸುನೀಲ್ (38) ಎಂದು ಗುರುತಿಸಲಾಗಿದೆ. ಅವರು ಸಾಗರದ ಮಾಸೂರಿನ ಪಶು ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ (ಜ.11) ಕುಟುಂಬ ಸಮೇತರಾಗಿ ಶರಾವತಿ ಹಿನ್ನೀರಿಗೆ ಪಿಕ್‌ನಿಕ್ ಹೋಗಿದ್ದರು. ಈ ವೇಳೆ ಈಜಲು ನೀರಿಗಿಳಿದಿದ್ದಾಗ ಮುಳುಗಿ ಸಾವನ್ನಪ್ಪಿದ್ದಾರೆ.
ಸುನೀಲ್ ನೀರಲ್ಲಿ ಮುಳುಗಿ ನಾಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ನೀರಿನಿಂದ ಶವ ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



