ಬೆಳ್ತಂಗಡಿ: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ದಂಪತಿ ಜ.7 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿಸಾಲಿನ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಕಟ್ಟಡ ಹಾಗೂ ಯೋಜನೆಯ 2024-25 ರ ಜ್ಞಾನದೀಪ ಕಾರ್ಯಕ್ರಮ ಉದ್ಘಾಟಿಸುವ ಸಲುವಾಗಿ ಆಗಮಿಸಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು, ಪತ್ನಿ ಡಾ| ಸುದೇಶ್ ಧನ್‌ಕರ್, ಜ್ಞಾನವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮ ಅಧ್ಯಕ್ಷೆ ಡಾ| ಹೇಮಾವತಿ ವೀ.ಹೆಗ್ಗಡೆ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್‌ಕುಮಾರ್ ಎಸ್.ಎಸ್., ಡಿ.ಸುರೇಂದ್ರ ಕುಮಾರ್, ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.