Wednesday, April 16, 2025
Google search engine

Homeರಾಜ್ಯಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

ಬೆಂಗಳೂರು: ಇಂದು ಶನಿವಾರ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡ ಅವರ ಮನೆಗೆ ಭೇಟಿ ನೀಡಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್ ಡಿ ದೇವೇಗೌಡರ ನಿವಾಸಕ್ಕೆ ಆಗಮಿಸಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸಚಿವ ಹೆಚ್ .ಡಿ.ಕುಮಾರಸ್ವಾಮಿ ಹೂಗುಚ್ಛ ನೀಡಿ ಸ್ವಾಗತಿಸಿದರು. ಉಪರಾಷ್ಟ್ರಪತಿ, ಹೆಚ್ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆಗೆ ಸ್ವಲ್ಪ ಸಮಯ ಮಾತನಾಡಿ ತೆರಳಿದ್ದಾರೆ ಎಂಬುವುದಾಗಿ ಹೇಳಲಾಗಿದೆ.

ಶುಕ್ರವಾರ ಮಂಡ್ಯದ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಭಾಗಿಯಾಗಿದ್ದರು. ಕಾರ್ಯಕ್ರಮದ ತರುವಾಯ ಇಬ್ಬರು ನಾಯಕರು ಕೂಡ ಒಟ್ಟಿಗೆ ಬೆಂಗಳೂರಿಗೆ ಆಗಮಿಸಿದರು ಎಂಬ ಮಾಹಿತಿ ಲಭ್ಯವಾಗಿದೆ.

RELATED ARTICLES
- Advertisment -
Google search engine

Most Popular