ಬೆಂಗಳೂರು : ಮೈಸೂರಿನ ಕೆ.ಆರ್.ನಗರದ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ(ಮೇ.೨೯) ಕೋರ್ಟ್ ಮುಂದೂಡಿದೆ.
ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ವಿಚಾರಣೆ ನಡೆಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಗುರುವಾರ ಅಥವಾ ಶುಕ್ರವಾರಕ್ಕೆ ಕಾಲಾವಕಾಶ ಕೋರಿದರು. ಈ ವೇಳೆ ಭವಾನಿ ರೇವಣ್ಣ ಪರ ವಕೀಲರು, ಎಫ್‌ಐಆರ್ ನಲ್ಲಿ ಆರೋಪಿ ಮಾಡದೆ ಬಂಧಿಸುವ ಸಾಧ್ಯತೆ ಇದೆ. ಹೀಗಾಗಿ ಮಧ್ಯಂತರ ಜಾಮೀನು ನೀಡುವಂತೆ ಕೋರಿದರು. ಈ ವೇಳೆ ನ್ಯಾಯಾಲಯವು ಆಕ್ಷೇಪಣೆ ಸಲ್ಲಿಸಲಿ ಎಂದು ವಿಚಾರಣೆಯನ್ನು ನಾಳೆ ಮೇ.೨೯ಕ್ಕೆ ಮುಂದೂಡಿದೆ.