ಮಂಗಳೂರು (ದಕ್ಷಿಣ ಕನ್ನಡ): ಅಕ್ಟೋಬರ್ 21 ರಂದು ನಡೆಯಲಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆಯ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ ವಿಜಯೇಂದ್ರ ಅವರು ಮಂಗಳೂರಿನ ಒಡ್ಡೂರು ಫಾರ್ಮ್ಸ್‌ನಲ್ಲಿ ಪಕ್ಷದ ಪ್ರಮುಖರ ಸಭೆ ನಡೆಸಿ ಪಕ್ಷದ ಕೆಲಸ ಕಾರ್ಯಗಳ ಕುರಿತು ಮಾರ್ಗದರ್ಶನ ನೀಡಿದರು.

ಈ ಸಂದರ್ಭ ರಾಜ್ಯ ಸಹ ಉಸ್ತುವಾರಿಗಳಾದ ಸುಧಾಕರ್ ರೆಡ್ಡಿ, ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್ ಕುಮಾರ್, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.