Friday, April 11, 2025
Google search engine

Homeರಾಜಕೀಯಮಂಗಳೂರು: ವಿಧಾನಪರಿಷತ್ ಉಪಚುನಾವಣೆ ಮತ ಎಣಿಕೆ ಪ್ರಾರಂಭ

ಮಂಗಳೂರು: ವಿಧಾನಪರಿಷತ್ ಉಪಚುನಾವಣೆ ಮತ ಎಣಿಕೆ ಪ್ರಾರಂಭ

ಮಂಗಳೂರು (ದಕ್ಷಿಣ ಕನ್ನಡ): ವಿಧಾನಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪಚುನಾವಣೆಯ ಮತ ಎಣಿಕೆ ಗುರುವಾರ (ಅಕ್ಟೋಬರ್ 24) ರಂದು ಮಂಗಳೂರಿನ ಸಂತ ಅಲೋಷಿಯಸ್ ಪಿಯು ಕಾಲೇಜಿನಲ್ಲಿ ಬೆಳಿಗ್ಗೆ 8 ಗಂಟೆಗೆ ಆರಂಭಗೊಂಡಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ಕಾರ್ಯ ಆರಂಭಗೊಂಡಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ಮತ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ ಗೆ 33 ರಂತೆ ಮತಪೆಟ್ಟಿಗೆಗಳ ಹಂಚಿಕೆ ಮಾಡಲಾಗಿದೆ.

ಅಕ್ಟೋಬರ್ 21(ಸೋಮವಾರ) ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5906 ಮತದಾರರು ಮತದಾರರು ಮತ ಚಲಾಯಿಸಿದರು.

ಈಗಾಗಲೇ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಮೊದಲ ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ಆನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯ ದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುವುದು. ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular