ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಾದ ಡಾ. ಯತೀಂದ್ರ, ಎನ್.ಎಸ್. ಬೋಸರಾಜು, ಕೆ. ಗೋವಿಂದರಾಜು, ಬಲ್ಕಿಸ್ ಬಾನು, ಐವನ್ ಡಿಸೋಜ, ವಸಂತ ಕುಮಾರ್, ಜಗದೇವ್ ಗುತ್ತೇದಾರ್ ಅವರು ಇಂದು ಸೋಮವಾರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ. ಶಿವಕುಮಾರ್, ಸಚಿವರುಗಳು ಇದ್ದರು. ತಮ ಪಕ್ಷದ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿ ನಂತರ ಮಾತನಾಡಿದ ಮುಖ್ಯಮಂತ್ರಿ, ಎಕ್ಸಿಟ್ ಪೋಲ್ ನರೇಂದ್ರ ಮೋದಿ ಫ್ಯಾಂಟಸಿ ಪೋಲ್. ನಾವು ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ. ಕರ್ನಾಟಕದಲ್ಲಿ ನಾವು ೧೫ರಿಂದ ೨೦ ಸ್ಥಾನ ಗೆಲ್ಲುತ್ತೇವೆ. ಸಮೀಕ್ಷೆಯನ್ನು ಸಂಪೂರ್ಣ ತಳ್ಳಿ ಹಾಕುತ್ತೇವೆ ಎಂದರು.