Monday, May 11, 2026
Google search engine

Homeರಾಜಕೀಯಮೊದಲ ಪ್ರಯತ್ನದಲ್ಲೇ ವಿಜಯ್ ಇತಿಹಾಸ : ಸಿದ್ದರಾಮಯ್ಯ ಮೆಚ್ಚುಗೆ

ಮೊದಲ ಪ್ರಯತ್ನದಲ್ಲೇ ವಿಜಯ್ ಇತಿಹಾಸ : ಸಿದ್ದರಾಮಯ್ಯ ಮೆಚ್ಚುಗೆ

ಬೆಂಗಳೂರ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಇತಿಹಾಸ ನಿರ್ಮಿಸಿರುವ ಟಿವಿಕೆ ಪಕ್ಷದ ನಾಯಕ, ನಟ ಜೋಸೆಫ್ ವಿಜಯ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ವಿಜಯ್ ಅವರಿಗೆ ಶುಭಾಶಯ ಕೋರಿದ ಸಿದ್ದರಾಮಯ್ಯ ಅವರು, ತಮಿಳುನಾಡಿನ ಅಭಿವೃದ್ಧಿಗಾಗಿ ಅವರ ಆಡಳಿತ ಯಶಸ್ವಿಯಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ನೆರೆಹೊರೆಯ ರಾಜ್ಯಗಳಾದ ಕರ್ನಾಟಕ ಮತ್ತು ತಮಿಳುನಾಡು ನಡುವೆ ಸೌಹಾರ್ದಯುತ ಸಂಬಂಧವನ್ನು ಮುಂದುವರಿಸುವ ಮತ್ತು ಅಂತರ್-ರಾಜ್ಯ ವಿಷಯಗಳಲ್ಲಿ ಸಹಕಾರದಿಂದ ಕೆಲಸ ಮಾಡುವ ಕುರಿತು ಇಬ್ಬರು ನಾಯಕರು ಆಶಯ ವ್ಯಕ್ತಪಡಿಸಿದರು ಎನ್ನಲಾಗಿದೆ.

ಸಿನಿಮಾ ರಂಗದಿಂದ ರಾಜಕೀಯಕ್ಕೆ ಬಂದು ಮೊದಲ ಪ್ರಯತ್ನದಲ್ಲೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ವಿಜಯ್ ಅವರ ಸಾಧನೆಯನ್ನು ಸಿದ್ದರಾಮಯ್ಯ ಅವರು ಶ್ಲಾಘಿಸಿದರು. ದಕ್ಷಿಣ ಭಾರತದ ರಾಜಕೀಯದಲ್ಲಿ ಈ ಹೊಸ ಬದಲಾವಣೆಯು ಉಭಯ ರಾಜ್ಯಗಳ ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳಿಗೆ ಹೊಸ ವೇಗ ನೀಡಲಿದೆ ಎಂದು ನಿರೀಕ್ಷಿಸಲಾಗಿದೆ.

RELATED ARTICLES
- Advertisment -
Google search engine

Most Popular