Friday, April 18, 2025
Google search engine

HomeUncategorizedರಾಷ್ಟ್ರೀಯಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ವಿಜಯ್​​ ಶಂಕರ್ ನೇಮಕ

ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ವಿಜಯ್​​ ಶಂಕರ್ ನೇಮಕ

ನವದೆಹಲಿ: ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಸಿ. ಹೆಚ್‌ ವಿಜಯ್‌ ಶಂಕರ್‌ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ.

ಅವರು ಹುಣಸೂರು ಕ್ಷೇತ್ರದ ಶಾಸಕ ಹಾಗೂ ಮೈಸೂರಿನ ಸಂಸದರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಿ.ಎಚ್​ ವಿಜಯ್​ ಶಂಕರ್​ ಅವರು ರಾಣೆ ಬೆನ್ನೂರು ಮೂಲದವರಾಗಿದ್ದು, 1994ರಿಂದ 98ರವರೆಗೆ ಮೊದಲ ಬಾರಿಗೆ ಹುಣಸೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿದ್ದರು. ಬಳಿಕ 1998 ಹಾಗೂ 2004ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. 2010ರಿಂದ 16ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು, 2010ರಲ್ಲಿ ಕರ್ನಾಟಕ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು.

ತೆಲಂಗಾಣ, ಜಾರ್ಖಂಡ್, ಮೇಘಾಲಯ ಸೇರಿದಂತೆ ಒಟ್ಟು 10 ರಾಜ್ಯಗಳಿಗೆ ರಾಜ್ಯಪಾಲರ ನೇಮಕವಾಗಿದೆ. ತೆಲಂಗಾಣ ಹಾಗೂ ಜಾರ್ಖಂಡ್​ನ ಹಾಲಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ನೇಮಿಸಲಾಗಿದೆ. ಹರಿಬಾವ್ ಕಿಶನ್ ಬಾವ್ ಬಾಗಡೆ ಅವರನ್ನು ರಾಜಸ್ಥಾನಕ್ಕೆ , ಸಂತೋಷ್ ಕುಮಾರ್ ಗಂಗ್ವಾರ್ ಅವರನ್ನು ಜಾರ್ಖಂಡ್​ಗೆ ನೇಮಿಸಲಾಗಿದೆ. ರಾಮನ್​ ಡೇಕಾ ಅವರನ್ನು ಛತ್ತೀಸ್​ಗಢ ರಾಜ್ಯಪಾಲರಾಗಿ, ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರಾಗಿ, ಓಂ ಪ್ರಕಾಶ್ ಮಾಥುರ್ ಅವರನ್ನು ಸಿಕ್ಕಿಂ ರಾಜ್ಯಪಾಲರಾಗಿ ನೇಮಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಆಪ್ತರಾಗಿದ್ದ ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.

ಅಸ್ಸಾಂನ ಹಾಲಿ ರಾಜ್ಯಪಾಲರಾದ ಗುಲಾಬ್ ಚಂದ್ ಕಟಾರಿಯಾ ಅವರನ್ನು ಪಂಜಾಬ್ ರಾಜ್ಯಪಾಲರಾಗಿ, ಜೊತೆಗೆ ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತಾಧಿಕಾರಿ ಯಾಗಿ ನೇಮಿಸಲಾಗಿದೆ. ಅಸ್ಸಾಂಗೆ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ನೇಮಿಸಿದ್ದು, ಇವರಿಗೆ ಮಣಿಪುರದ ರಾಜ್ಯಪಾಲರಾಗಿಯೂ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

RELATED ARTICLES
- Advertisment -
Google search engine

Most Popular