Friday, April 11, 2025
Google search engine

HomeUncategorizedರಾಷ್ಟ್ರೀಯವಿಜಯದಶಮಿ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ

ವಿಜಯದಶಮಿ: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ

ನವದೆಹಲಿ: ದೇಶದಾದ್ಯಂತ ವಿಜಯದಶಮಿ ಹಬ್ಬದ ಸಡಗರ ಮನೆ ಮಾಡಿದ್ದು,  ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ದೇಶದ ಜನತೆ ಹಬ್ಬದ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಎಕ್ಸ್‌’ನಲ್ಲಿ ಶುಭಾಶಯ ತಿಳಿಸಿರುವ ಮೋದಿ, ನಕರಾತ್ಮಕ ಶಕ್ತಿಗಳನ್ನು ತೊಡೆದುಹಾಕಿ ಜೀವನದಲ್ಲಿ ಒಳ್ಳೆಯತನವನ್ನು ಅಳವಡಿಸಿಕೊಳ್ಳುವ ಉತ್ತಮ ಸಂದೇಶವನ್ನು ಈ ಹಬ್ಬವು ಹೊಂದಿದೆ. ದೇಶದ ಜನರಿಗೆ ವಿಜಯದಶಮಿಯ ಶುಭಾಶಯಗಳು ಎಂದು ಹೇಳಿದರು.

ಅಧರ್ಮದ ವಿರುದ್ಧ ಧರ್ಮವು ಜಯಿಸಿದ ಈ ವಿಜಯದಶಮಿಯ ದಿನದಂದು ನಮ್ಮ ನಡುವಿನ ದ್ವೇಷ, ಅಸೂಯೆ, ಅಸತ್ಯಗಳು ಅಳಿದು, ಸತ್ಯ, ಪ್ರೀತಿ, ಸೌಹಾರ್ದತೆಗಳು ವಿಜೃಂಭಿಸಲಿ ಎಂದು ಹಾರೈಸುತ್ತೇನೆ. ಕರುನಾಡು ಸುಖ, ಸಮೃದ್ಧಿಯನ್ನೊಳಗೊಂಡ ಸರ್ವಜನಾಂಗದ ಶಾಂತಿಯ ತೋಟವಾಗಲಿ ಎಂದು ಆಶಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಡುಕಿನ ವಿರುದ್ಧ ಒಳಿತಿನ ವಿಜಯದ ಮಹಾ ಹಬ್ಬವೇ ವಿಜಯದಶಮಿ. ಸುಳ್ಳು ಮತ್ತು ಅಹಂಕಾರ ನಾಶವಾಗಿ ಪ್ರತಿಯೊಬ್ಬರ ಜೀವನದಲ್ಲಿ ಸತ್ಯ ಮತ್ತು ಮಾನವೀಯತೆ ನೆಲೆಸುವಂತಾಗಬೇಕು ಎಂದು ಹೇಳುವ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಬ್ಬದ ಶುಭಾಶಯ ಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡದೇವತೆ  ಚಾಮುಂಡೇಶ್ವರಿ ತಾಯಿ ಸಕಲ ಭಕ್ತರಿಗೆ ಆರೋಗ್ಯ, ಆಯಸ್ಸು, ನೆಮ್ಮದಿ ಕರುಣಿಸಿ ಎಲ್ಲರ ಇಷ್ಟಾರ್ಥಗಳನ್ನು ಈಡೇರಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್‌ ಪಕ್ಷದ ವರಿಷ್ಠ ಎಚ್‌.ಡಿ ದೇವೇಗೌಡ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular