ವಿಜಯನಗರ: ರಾಜ್ಯಾದ್ಯಂತ ವರುಣನ ಆರ್ಭಟ ಹೆಚ್ಚಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅದರಂತೆ ವಿಜಯನಗರ ಜಿಲ್ಲೆಯಲ್ಲಿಯೂ ಮಹಾ ಮಳೆಗೆ ಜನರು ತತ್ತರಿಸಿ ಹೋಗಿದ್ದು, ಮಳೆ ಅವಾಂತರಕ್ಕೆ ಓರ್ವ ಮಹಿಳೆ ಬಲಿಯಾಗಿದರೆ, ಮೂವರಿಗೆ ಗಾಯಗಳಾಗಿವೆ.
ಜಿಲ್ಲೆಯಲ್ಲಿ 500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ವಿವಿಧ ಬೆಳೆಗಳು ಸಂಪೂರ್ಣ ನಾಶವಾಗಿದ್ದು ಮಳೆಗೆ ಕೂಡ್ಲಿಗಿ, ಹೂವಿನಹಡಗಲಿ, ಕೊಟ್ಟೂರು ತಾಲೂಕುಗಳಲ್ಲಿ 80ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿದೆ.
ಈ ಹಿನ್ನಲೆಯಲ್ಲಿ ಜಿಲ್ಲೆಯ 22 ಗ್ರಾಮಗಳ ನದಿ ಪಾತ್ರದ ಜನರ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ.