ವಿಜಯಪುರ: ವಕ್ಫ್ ನಿಂದ ಭೂ ಕಬಳಿಕೆ ವಿರೋಧಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ವಿಜಯಪುರ ಜಿಲ್ಲೆಯ ಮಠಾಧೀಶರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.
ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಹೋರಾಟ ಮಾಡಲಾಗುತ್ತಿದೆ. ಕನ್ನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿ, ಪಂಚಮಸಾಲಿ ಜಗದ್ಗುರು ಡಾ. ಮಹಾದೇವ ಶಿವಾಚಾರ್ಯರು, ಯರನಾಳ ವಿರಕ್ತಮಠದ ಶ್ರೀ ಗುರು ಸಂಗನಬಸವ ಶಿವಾಚಾರ್ಯರು, ಬುರಾಣಪೂರದ ಮಾತೋಶ್ರೀ ಯೋಗೇಶ್ವರಿ ಮಾತಾಜಿ ಹಲವು ಸ್ವಾಮೀಜಿಗಳು ವೇದಿಕೆಯಲ್ಲಿದ್ದಾರೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದರಾದ ರಮೇಶ ಜಿಗಜಿಣಗಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಅನೇಕ ಮುಖಂಡರು ವೇದಿಕೆಯ ಕೆಳಗಡೆ ಕುಳಿತಿದ್ದಾರೆ.
ಈ ಹೋರಾಟದ ನಂತರ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶಾಸಕ ಯತ್ನಾಳ ಅಹೋರಾತ್ರಿ ಧರಣಿ ನಡೆಸಲಿದ್ದಾರೆ.