ಮಂಡ್ಯ: ರಸ್ತೆ ದುರಸ್ತಿ ಕಾರ್ಯ ಮಾಡದ ಜನಪ್ರತಿನಿಧಿಗಳ ವಿರುದ್ಧ ರಸ್ತೆಯಲ್ಲೆ ನಾಟಿ ಮಾಡಿ ಗ್ರಾಮಸ್ಥರು ಪ್ರತಿಭಟಿಸಿದ್ದಾರೆ.
ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ದೇಶಹಳ್ಳಿ ಗ್ರಾಮದ ಗಾಂಧಿನಗರದಲ್ಲಿ ಹಲವು ವರ್ಷಗಳಿಂದ ಹದಗೆಟ್ಟಿರುವ ರಸ್ತೆ ಹಿನ್ನಲೆ ನಾಟಿ ಮಾಡುವ ಮೂಲಕ ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ.
ಸರ್ಕಾರ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿನಿತ್ಯ ಶಾಲಾ-ಕಾಲೇಜಿಗೆ ತೆರಳುವ ಮಕ್ಕಳಿಗೆ ತೊಂದರೆಯಾಗುತ್ತಿದೆ. ದ್ವಿಚಕ್ರ ವಾಹನ ಚಲಾಯಿಸಲು ಸಹ ಆಗದೆ ಎಷ್ಟೋ ಜನ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ತಕ್ಷಣವೇ ರಸ್ತೆ ದುರಸ್ತಿ ಕಾರ್ಯ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.