Friday, April 4, 2025
Google search engine

HomeUncategorizedರಾಷ್ಟ್ರೀಯಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರೈಲ್ವೆ ಹುದ್ದೆಗೆ ವಿನೇಶ್ ಫೋಗಟ್ ರಾಜೀನಾಮೆ

ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರೈಲ್ವೆ ಹುದ್ದೆಗೆ ವಿನೇಶ್ ಫೋಗಟ್ ರಾಜೀನಾಮೆ

​ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಬೆನ್ನಲ್ಲೇ ಭಾರತೀಯ ಕುಸ್ತಿಪಟು ವಿನೇಶ್ ಫೋಗಟ್ ಅವರು ರೈಲ್ವೆ ಹುದ್ದೆಗೆ ಇಂದು (ಶುಕ್ರವಾರ) ರಾಜೀನಾಮೆ ನೀಡಿದ್ದಾರೆ.

ರೈಲ್ವೆ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಬಗ್ಗೆ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ವಿನೇಶ್, ‘ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಗುಳಿಯಲು ನಿರ್ಧರಿಸಿದ್ದು, ಅಧಿಕಾರಿಗಳಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ದೇಶಕ್ಕೆ ಸೇವೆ ಸಲ್ಲಿಸಲು ನನಗೆ ಅವಕಾಶ ನೀಡಿದ ಭಾರತೀಯ ರೈಲ್ವೆ ಕುಟುಂಬಕ್ಕೆ ನಾನು ಎಂದೆಂದಿಗೂ ಚಿರಋಣಿಯಾಗಿರುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಹರಿಯಾಣ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಪುನಿಯಾ ಮತ್ತು ವಿನೇಶ್ ಇಬ್ಬರೂ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ. ಆದರೆ, ಅವರಲ್ಲಿ ಒಬ್ಬರು ಸ್ಪರ್ಧಿಸುತ್ತಾರೆಯೇ ಅಥವಾ ಇಬ್ಬರೂ ಸ್ಪರ್ಧಿಸುತ್ತಾರೆಯೇ ಎಂಬುದು ಶೀಘ್ರದಲ್ಲೇ ಸ್ಪಷ್ಟವಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

RELATED ARTICLES
- Advertisment -
Google search engine

Most Popular