ದಾವಣಗೆರೆ: ಲೋಕಸಭಾ ಚುನಾವಣೆ ನಡೆಯುತ್ತಿದ್ದು ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ನ್ಯಾಮತಿ ತಾಲ್ಲೂಕಿನ ಹೊಳೆಹರಹಳ್ಳಿ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ 3.98 ಲಕ್ಷ ನಗದು ಮತ್ತು 21 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.