ದೆಹಲಿ: ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ.ಇಬ್ಬರು ನಾಯಕರು ಏ.೨೯ರಂದು ಬೆಳಿಗ್ಗೆ ೧೧ ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಕೆಲವು ದಿನಗಳ ಹಿಂದೆ ರಾಜಸ್ಥಾನದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಪರೋಕ್ಷವಾಗಿ ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಹಿಂದೂಗಳ ಸಂಪತ್ತನ್ನು ಹೆಚ್ಚು ಮಕ್ಕಳಿರುವವರಿಗೆ ಹಂಚುವ ಪ್ರಣಾಳಿಕೆಯು ಕಾಂಗ್ರೆಸ್‌ನದ್ದಾಗಿದೆ ಎಂದಿದ್ದರು.
ಮೋದಿಯ ಈ ಭಾಷಣಕ್ಕಾಗಿ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಲಕ್ಷಾಂತರ ನಾಗರಿಕರು ಪ್ರಧಾನಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆರಂಭದಲ್ಲಿ ಆಯೋಗ ತಾನು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಹೆಚ್ಚು ಸಂಪತ್ತು ಹೊಂದಿರುವವರಿಂದ ಬಡವರಿಗೆ ಸಂಪತ್ತಿನ ಹಂಚಿಕೆ ಮಾಡುವುದಾಗಿ ಹೇಳಿದ್ದರು.