Friday, April 4, 2025
Google search engine

HomeUncategorizedರಾಷ್ಟ್ರೀಯಮಣಿಪುರದಲ್ಲಿ ಮತ್ತೆ ಹಿಂಸಾಚಾರ, 9 ಸಾವು, ಹಲವರಿಗೆ ಗಾಯ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ, 9 ಸಾವು, ಹಲವರಿಗೆ ಗಾಯ

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ಮಂಗಳವಾರ ತಡರಾತ್ರಿ ಮಣಿಪುರದಲ್ಲಿ ವರದಿಯಾದ ಹಿಂಸಾಚಾರದಲ್ಲಿ ಕನಿಷ್ಠ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ, ಐವರು ಗಾಯಗೊಂಡಿದ್ದಾರೆ.

ಖಮೆನ್ಲೋಕ್ ಪ್ರದೇಶದಲ್ಲಿ ಗುಂಡಿನ ದಾಳಿ ಆಗಿದೆ. ಮೈತೈ ಪ್ರಾಬಲ್ಯದ ಇಂಫಾಲ್ ಪೂರ್ವ ಜಿಲ್ಲೆ ಮತ್ತು ಬುಡಕಟ್ಟು ಜನಾಂಗದ ಬಹುಸಂಖ್ಯಾತ ಕಾಂಗ್ಪೋಕ್ಪಿ ಜಿಲ್ಲೆಯ ಗಡಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಖಮೆನ್ಲೋಕ್ ನಲ್ಲಿ ಹಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ವರದಿ ತಿಳಿಸಿದೆ.

ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಉಗ್ರರು ಇಂಫಾಲ್ ಪೂರ್ವ ಜಿಲ್ಲೆ ಮತ್ತು ಕಾಂಗ್ಪೋಕಿ ಜಿಲ್ಲೆಯ ಗಡಿಯಲ್ಲಿರುವ ಖಮೆನ್ಲೋಕ್ ಪ್ರದೇಶದ ಗ್ರಾಮಸ್ಥರನ್ನು ಸುತ್ತುವರೆದು ದಾಳಿ ನಡೆಸಿದರು ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular