ಹಾಸನ : ಜಗತ್ತನ್ನೇ ನಿರ್ಮಿಸಿದವರು ವಿಶ್ವಕರ್ಮರು. ಅಮರಶಿಲ್ಪಿ ಜಕಣಾಚಾರಿಯವರನ್ನು ಎಲ್ಲರೂ ಅದರಲ್ಲಿಯೂ ನಮ್ಮ ಹಾಸನ ನೆನಪೂ ಮಾಡಿಕೊಳ್ಳಲೇಬೇಕು ಎಂದು ಜಿಲ್ಲಾಧಿಕಾರಿ ಲತಾಕುಮಾರಿ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಂದು ಹಮ್ಮಿಕೊಂಡಿರುವ ವಿಶ್ವಕರ್ಮ ಜಯಂತಿ ಅಂಗವಾಗಿ ಇಂದು ಏರ್ಪಡಿಸಿದ್ದ ಮೆರವಣಿಗೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಚಾಲನೆ ನೀಡಿ ಮಾತನಾಡಿದ ಅವರು ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇಂದಿಗೂ ಅಮರಶಿಲ್ಪಿ ಜಕಣಾಚಾರಿ ಅವರ ಹೆಸರು ಅಚ್ಚು ಒತ್ತಿ ನಿಂತಿದೆ ಎಂದರಲ್ಲದೆ, ವಿಶ್ವಕರ್ಮ ಜಯಂತಿಯ ಶುಭಾಷಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಹೆಚ್.ಪಿ ತಾರಾನಾಥ್, ಸಮುದಾಯದ ಮುಖಂಡರು ಹಾಗೂ ಮತ್ತಿತರರು ಹಾಜರಿದ್ದರು.