ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ನಡೆಯುತ್ತಿರುವ ಕಾವೇರಿ ಹೋರಾಟಕ್ಕೆ ವಿಶ್ವಕರ್ಮ ಮಹಾಸಭಾ ಬೆಂಬಲ ವ್ಯಕ್ತಪಡಿಸಿದ್ದು, ಪರಿಷತ್ ಸದಸ್ಯ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಕೆ.ಪಿ.ನಂಜುಂಡಿ ಹಾಗೂ ವಿಶ್ವಕರ್ಮ ಸಮಾಜದ ನೂರಾರು ಜನರು ಮಂಡ್ಯದ ಸಂಜಯ ವೃತ್ತದಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೆ ಪ್ರತಿಭಟನಾ ಮೆರವಣಿಗೆ ಸಾಗಲಿದ್ದಾರೆ.
ಬಳಿಕ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಡೆಸುತ್ತಿರುವ ನಿರಂತರ ಧರಣಿಯಲ್ಲಿ ಭಾಗಿಯಾಗಲಿದ್ದಾರೆ.