Saturday, April 19, 2025
Google search engine

Homeರಾಜಕೀಯಸ್ವಯಂಪ್ರೇರಿತ, ಷರತ್ತುರಹಿತ ಕಾಂಗ್ರೆಸ್ ಸೇರ್ಪಡೆ, ಆಪರೇಷನ್ ಅಲ್ಲ: ಎಂ.ಬಿ.ಪಾಟೀಲ್

ಸ್ವಯಂಪ್ರೇರಿತ, ಷರತ್ತುರಹಿತ ಕಾಂಗ್ರೆಸ್ ಸೇರ್ಪಡೆ, ಆಪರೇಷನ್ ಅಲ್ಲ: ಎಂ.ಬಿ.ಪಾಟೀಲ್

ವಿಜಯಪುರ: ಬಿಜೆಪಿ ಪಕ್ಷದಲ್ಲಿ ಉಸಿರುಗಟ್ಟಿಸುವ ವಾತಾವರಣದಿಂದ ಬೇಸತ್ತು ಕೆಲವು ನಾಯಕರು ಸ್ವಯಂ ಪ್ರೇರಿತರಾಗಿ, ಷರತ್ತು ರಹಿತವಾಗಿ ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ ತೋರುತ್ತಿದ್ದಾರೆ. ಇದನ್ನು ಸ್ವಾಗತಿಸುತ್ತೇನೆ. ಆದರೆ ಇದು ಆಪರೇಷನ್ ಕಾಂಗ್ರೆಸ್, ಹಸ್ತ ಅಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸ್ಪಷ್ಟಪಡಿಸಿದರು.

ಗುರುವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಿದ್ದಾಂತಗಳನ್ನು ನಂಬಿ, ಯಾವದೇ ಷರತ್ತು ಹಾಕದೇ ಪಕ್ಷಕ್ಕೆ ಬಂದರೆ ಅವರನ್ನು ಸ್ವಾಗತಿಸುತ್ತೇವೆ. ಕಾಂಗ್ರೆಸ್ ಹೈಕಮಾಂಡ್ ಸ್ಥಳಿಯ ಕಾರ್ಯಕರ್ತರ ಹಿತವನ್ನು ಗಮನದಲ್ಲಿ ಇಟ್ಟುಕೊಂಡು, ಅವರ ಅಭಿಪ್ರಾಯ ಪಡೆದ ಮೇಲೆ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದರು.
ನಾವು ಆಪರೇಷನ್ ಮಾಡುತ್ತಿಲ್ಲ. ಬಿಜೆಪಿ ಪಕ್ಷದಲ್ಲಿನ ಉಸಿರುಗಟ್ಟುವ ವಾತಾವರಣದಿಂದ ಬೇಸತ್ತು ಅವರಾಗಿಯೇ ಬಂದಾಗ ಸ್ವಾಗತಿಸುತ್ತಿದ್ದೇವೆ. ಆದರೆ ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ. ಕೆಲವು ನಾಯಕರ ಕಾಂಗ್ರೆಸ್ ಸೇರ್ಪಡೆಗೆ ಪಕ್ಷದಲ್ಲಿ ಕೆಲವು ನಾಯಕರು ವರಿಷ್ಠರಿಗೆ ದೂರು ನೀಡಿದ ವಿಚಾರವನ್ನು ಪಕ್ಷದ ವರಿಷ್ಟರು ನೋಡಿಕೊಳ್ಳುತ್ತಾರೆ. ಎಐಸಿಸಿ ಆಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪರಿಶೀಲಿಸಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದರು.

ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಗಂಗಾಪೂಜೆ ಹಾಗೂ ಬಾಗೀನ ಅರ್ಪಣೆಗೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದು, ಶೀಘ್ರದಲ್ಲೇ ಕೃಷ್ಣೆಗೆ ಬಾಗೀನ ಅರ್ಪಣೆ ಮಾಡಲಾಗುತ್ತದೆ ಎಂದರು.

RELATED ARTICLES
- Advertisment -
Google search engine

Most Popular