Wednesday, April 16, 2025
Google search engine

Homeರಾಜಕೀಯಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ: ಕೆ.ಎಸ್.ಈಶ್ವರಪ್ಪ

ಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಸ್ಲಿಮರು ಮಾಡುತ್ತಿರುವ ಅಚಾತುರ್ಯ ಗಮನಿಸಿ ಕಾಂಗ್ರೆಸ್‌ನವರು ಮೌನವಾಗಿದ್ದಾರೆ. ಪ್ರತಿನಿತ್ಯ ಮುಸ್ಲಿಮರ ಒಂದಲ್ಲ ಒಂದು ಅನ್ಯಾಯ ಕಾಣುತ್ತಿದೆ. ರೈತರು, ದೇವಸ್ಥಾನ, ಸಾಧು ಸಂತರು, ಪುರಾತತ್ವ ಇಲಾಖೆ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಮಾಡಿಕೊಂಡಿದ್ದಾರೆ. ವಕ್ಫ್ ಆಸ್ತಿ ಆಗಲು ಬಿಡಲ್ಲ ಎಂದು ಒಬ್ಬ ಕಾಂಗ್ರೆಸ್‌ನವರ ಬಾಯಲ್ಲಿ ಬರಲಿಲ್ಲ. ಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕಿ ಇಲ್ಲದಿದ್ದರೆ ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ ಎಂದರು.

ವಕ್ಫ್ ನೋಟಿಸ್ ವಾಪಸ್ ತೆಗೆದುಗೊಂಡಿದ್ದೇವೆ ಎಂದು ಹೇಳುತ್ತಾರೆ ಆದರೆ ಸಿಎಂ, ಡಿಸಿಎಂ ಈ ಬಗ್ಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳುವುದಿಲ್ಲ. ವಿಪಕ್ಷಗಳು ರಾಜಕಾರಣ ಮಾಡುತ್ತೇವೆ ಎಂದು ಹೇಳಿ ರಾಜಕಾರಣ ಮಾಡುತ್ತಿದ್ದಾರೆ. ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕಾರ ಮಾಡಲು ಸಿದ್ಧರಿದ್ದರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾನೆ. ಆದರೆ ಈ ಬಗ್ಗೆ ಒಬ್ಬ ಕಾಂಗ್ರೆಸ್ ನಾಯಕನೂ ಖಂಡಿಸಲಿಲ್ಲ ಎಂದು ಕಿಡಿಕಾರಿದರು.

ಇದೇ ವೇಳೆ ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಮೀಸಲಾತಿ ವಿಚಾರವಾಗಿ ಮಾತನಾಡಿ, ಮೀಸಲಾತಿ ಕೊಡುತ್ತೇವೆ ಎನ್ನುತ್ತಾರೆ. ಹಿಂದೂಸ್ಥಾನ ಏನು ಪಾಕಿಸ್ತಾನ ಮಾಡಲು ಹೊರಟಿದ್ದೀರಾ? ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳುತ್ತಾರೆ. ಬಾಂಗ್ಲಾದೇಶದಲ್ಲಿ ಹಲ್ಲೆ, ಕೊಲೆ ಆಯ್ತು. ಬಾಂಗ್ಲಾದೇಶದ ಪ್ರಧಾನಿಗೆ ಭಾರತದಲ್ಲಿ ರಕ್ಷಣೆ ಕೊಟ್ಟು ಇಟ್ಟಿದ್ದೇವೆ. ಪಾಕಿಸ್ತಾನದಲ್ಲಿ ಹಿಂದೂಗಳ ಹತ್ಯೆಯಾಯ್ತು. ಭಾರತದಲ್ಲಿಯೂ ಮುಸ್ಲಿಂರು ಈ ರೀತಿ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್‌ನವರು ವೋಟಿಗಾಗಿ ಭಾರತವನ್ನೇ ಮತಾಂತರ ಮಾಡಲು ಹೊರಟ್ಟಿದ್ದಾರೆ. ನೇರಾ ನೇರ ಖಂಡನೆ ಮಾಡಬೇಕು. ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಅವರ ಮೀಸಲಾತಿ ಕಿತ್ತುಕೊಳ್ಳಲು ಹೊರಟಿದ್ದಾರೆ. ಹಿಂದೂ ಸಮಾಜ ದಂಗೆ ಎದ್ದರೆ ಈ ಸರ್ಕಾರ, ನೀವೇ ಕಾರಣರಾಗುತ್ತೀರಿ ಎಂದು ಎಚ್ಚರಿಕೆ ನೀಡಿದರು.

RELATED ARTICLES
- Advertisment -
Google search engine

Most Popular