ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಪ್ರಕಟಿಸಲಾಗಿದೆ.
ಈ ಕುರಿತಂತೆ ರಾಜ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘದ ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಖಜಾಂಚಿ ಸ್ಥಾನದ ಚುನಾವಣೆ ಮತದಾರರ ಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ವಿವಿಧ ತಾಲ್ಲೂಕು ಮಟ್ಟದಲ್ಲಿ ಆಯ್ಕೆಯಾಗಿರುವಂತ ತಾಲ್ಲೂಕು ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ ಹಾಗೂ ರಾಜ್ಯ ಪರಿಷತ್ ಸದಸ್ಯರು ಒಳಗೊಂಡಂತೆ 947 ಮತದಾರರ ಪಟ್ಟಿಯನ್ನು ಪ್ರಕಟಿಸಿರುವುದಾಗಿ ರಾಜ್ಯ ಚುನಾವಣಾಧಿಕಾರಿ ಹನುಮನರಸಯ್ಯ ಅವರು ಹೇಳಿದ್ದಾರೆ.