Friday, April 11, 2025
Google search engine

Homeರಾಜ್ಯಮೋದಿಯವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ನಮಗೆ ಆಶೀರ್ವಾದ ಮಾಡಿದ್ದಾರೆ: ಬಿ.ವೈ.ವಿಜಯೇಂದ್ರ

ಮೋದಿಯವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ನಮಗೆ ಆಶೀರ್ವಾದ ಮಾಡಿದ್ದಾರೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಪ್ರಬುದ್ಧ ಮತದಾರರು ದೆಹಲಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ನರೇಂದ್ರ ಮೋದಿಯವರ ಕೈಯನ್ನು ಬಲಪಡಿಸಲು ಮತದಾರರು ಮತ್ತೊಮ್ಮೆ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.

ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಪರ ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಣೆಯ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ದೆಹಲಿ ರಾಜ್ಯದಲ್ಲಿ 27 ವರ್ಷಗಳ ನಂತರ ಬಿಜೆಪಿಗೆ ಅಭೂತಪೂರ್ವ ಗೆಲುವು ಲಭಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. ದೆಹಲಿಯ ಪಕ್ಷದ ಮುಖಂಡರು, ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ ಸಲ್ಲಿಸಿದ ಅವರು, ಭ್ರಷ್ಟಾಚಾರದ ವಿರುದ್ಧ ಆಂದೋಲನ ಮಾಡಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಅವರ ಮುಖವಾಡ ಕಳಚಿಬಿದ್ದಿದೆ ಎಂದು ನುಡಿದರು. ಕೇಜ್ರಿವಾಲ್ ಅವರೂ ಹಿನ್ನಡೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದರು.

ಆತಿಶಿ, ಮನೀಷ್ ಸಿಸೋಡಿಯ ಅವರೂ ಸೋಲುತ್ತಿದ್ದಾರೆ. ಲಿಕ್ಕರ್ ಗೇಟ್, ಶೀಷ್ ಮಹಲ್ ಹಗರಣದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಪ್ ಬಣ್ಣ ಬಯಲಾಗಿದೆ. ದೆಹಲಿ ಮತದಾರರು, ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ತಿಳಿಸಿದರು. ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಸತತ 3ನೇ ಬಾರಿಗೆ ಶೂನ್ಯ ಸಂಪಾದನೆ ಮಾಡಿದೆ. ಲೋಕಸಭಾ ಚುನಾವಣೆಯಲ್ಲೂ ಅದು ಶೂನ್ಯ ಸಂಪಾದನೆ ಮಾಡಿತ್ತು ಎಂದ ಅವರು, ಹರಿಯಾಣ, ಮಹಾರಾಷ್ಟ್ರದಲ್ಲೂ ಕಾಂಗ್ರೆಸ್ಸಿಗೆ ಮುಖಭಂಗ ಆಗಿತ್ತು ಎಂದು ವಿವರಿಸಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಗ್ಯಾರೆಂಟಿಗಳೆಲ್ಲ ತಾತ್ಕಾಲಿಕ ಎಂದರು. ತಾತ್ಕಾಲಿಕ ಗ್ಯಾರೆಂಟಿಗಿಂತ ದೃಢ ನಾಯಕತ್ವ ಕೊಡುವ ನರೇಂದ್ರ ಮೋದಿಜೀ ನೇತೃತ್ವದ ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂಬುದನ್ನು ದೆಹಲಿ ಮತದಾರರು ಮತ್ತೊಮ್ಮೆ ರುಜುವಾತು ಮಾಡಿದ್ದಾರೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular