ರಾಮನಗರ: ಮತದಾನಕ್ಕಿಂತ ಮತ್ತೊಂದು ದಾನ ಯಾವುದು ದೊಡ್ಡದಿಲ್ಲ, ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಮನು ಪಿ. ಕೆ. ಅವರು ತಿಳಿಸಿದರು.
ಅವರು ಇಂದು ಚನ್ನಪಟ್ಟಣ ತಾಲ್ಲೂಕಿನ ಎಲೆತೋಟದ ಗ್ರಾಮಪಂಚಾಯತಿ ವ್ಯಾಪ್ತಿಯ ಅಳೆಹಳ್ಳಿ ಗ್ರಾಮದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ೨೦೨೪ರ ಚಟುವಟಿಕೆ ಭಾಗವಾಗಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸಕ್ರಿಯವಾಗಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗೆ ಕೆಲಸದ ಸ್ಥಳದಲ್ಲಿ ಮತದಾನ ಮಹತ್ವವನ್ನು ಕುರಿತು ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮಹಿಳೆಯರಿಂದ ರಂಗೋಲಿ ಸ್ಪರ್ಧೆ ಕಾರ್ಯಕ್ರಮ ಹಾಗೂ ಜಾಥ ಕಾರ್ಯಕ್ರಮ ಮಾಡಿಸುವುದರ ಮೂಲಕ ಜಾಗೃತಿ ಮೂಡಿಸಿದರು. ಇದೇ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರಾದ ಸಿದ್ದರಾಜು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶ್ರೀಕಾಂತ್, ಸಂಜೀವಿನಿ ಒಕ್ಕೂಟದ ಸಿಬ್ಬಂದಿಗಳಾದ ಹರೀಶ್ ಬಾಬು, ಹೇಮತ್, ತಾಲ್ಲೂಕು ಐಇಸಿ ಸಂಯೋಜಕರಾದ ಭವ್ಯ, ಗ್ರಾಮ ಕಾಯಕ ಮಿತ್ರರು, ಬಿಎಫ್‌ಟಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಗೂ ಕೂಲಿಕಾರ್ಮಿಕರು ಉಪಸ್ಥಿತರಿದ್ದರು.