Sunday, April 20, 2025
Google search engine

Homeರಾಜ್ಯಜಗದೀಶ್‌ ಶೆಟ್ಟರ್‌ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ ಸ್ಥಾನಕ್ಕೆ ಜುಲೈ 12ರಂದು ಮತದಾನ

ಜಗದೀಶ್‌ ಶೆಟ್ಟರ್‌ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ ಸ್ಥಾನಕ್ಕೆ ಜುಲೈ 12ರಂದು ಮತದಾನ

ಬೆಂಗಳೂರು: ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ ಸ್ಥಾನಕ್ಕೆ ಜುಲೈ 12ರಂದ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಜಗದೀಶ್‌ ಶೆಟ್ಟರ್‌ ಅವರು 2023ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದರು. ಈ ವೇಳೆ ಅವರನ್ನು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯರನ್ನಾಗಿ ನೇಮಕ ಮಾಡಿತ್ತು. ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಜಗದೀಶ್‌ ಶೆಟ್ಟರ್‌ ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದರು. ನಂತರ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸದ್ಯ ಅವರು ಬಿಜೆಪಿಯಿಂದ ಬೆಳಗಾವಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯುತ್ತಿದೆ. ಜುಲೈ 12ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಜುಲೈ 2 ಕೊನೆಯ ದಿನವಾಗಿದೆ. ಮತದಾನದ ದಿನವೇ ಸಂಜೆ 5 ಗಂಟೆಗೆ ಪಲಿತಾಂಶ ಬರಲಿದೆ.

ಬಿಹಾರ, ಉತ್ತರಪ್ರದೇಶ, ಆಂಧ್ರಪ್ರದೇಶ ರಾಜ್ಯ ತಲಾ ಒಂದು ಸ್ಥಾನಗಳಿಗೂ ಜುಲೈ 12ರಂದು ಮತದಾನ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

RELATED ARTICLES
- Advertisment -
Google search engine

Most Popular