ಬೆಂಗಳೂರು/ಮೈಸೂರು: ಬೆಂಗಳೂರು ಸರ್ಕಾರಿ ಕಲಾ ಕಾಲೇಜು ಇಂದು ಬೆಂಗಳೂರು ಪದವೀಧರರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನ ಕಲಾ ಕಾಲೇಜಿನಲ್ಲಿ ನಡೆಯುತ್ತಿದೆ.
ಗುಲ್ಬರ್ಗ ವಿಶ್ವವಿದ್ಯಾಲಯ ಈಶಾನ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಗುಲ್ಬರ್ಗ ವಿಶ್ವವಿದ್ಯಾಲಯದ ಹೇಮರೆಡ್ಡಿ ಮಲ್ಲಮ್ಮ ಕಟ್ಟಡದಲ್ಲಿ ನಡೆಯುತ್ತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈಋತ್ಯ ಪದವೀಧರ ಕ್ಷೇತ್ರದ ಮತ ಎಣಿಕೆ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ನಡೆಯುತ್ತಿದೆ.
ವಿಧಾನ ಪರಿಷತ್ ಚುನಾವಣೆ ಸಂಬಂಧ ಮೈಸೂರಿನ ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಣಿ ವಿಜ್ಞಾನ ಕಾಲೇಜಿನಲ್ಲಿ ಇಂದು ಪ್ರಾದೇಶಿಕ ಆಯುಕ್ತರಾದ ಡಾ ಜಿ.ಸಿ. ಪ್ರಕಾಶ್ ಹಾಗೂ ಚುನಾವಣೆ ವೀಕ್ಷಕರಾದ ಡಾ ರವಿಶಂಕರ್ .ಜೆ. ಅವರ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರವುಗೊಳಿಸಲಾಯಿತು.
ಪ್ರತಿ ಕ್ಷೇತ್ರಕ್ಕೂ ೧೪ ಟೇಬಲ್‌ಗಳು ಮತ್ತು ಒಂದು ಚುನಾವಣಾಧಿಕಾರಿ ಟೇಬಲ್ ಅಳವಡಿಸಲಾಗಿದ್ದು, ಪ್ರತಿ ಟೇಬಲ್‌ಗೂ ಒಬ್ಬರು ಮೇಲ್ವಿಚಾರಕರು, ಇಬ್ಬರು ಸಹಾಯಕರನ್ನು ನಿಯೋಜಿಸಲಾಗಿದೆ. ಪ್ರತಿ ಟೇಬಲ್‌ಗೂ ಒಬ್ಬರಂತೆ ಏಜೆಂಟರನ್ನು ನೇಮಕ ಮಾಡಲಾಗಿದೆ.