Friday, April 18, 2025
Google search engine

Homeರಾಜ್ಯವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ; ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ...

ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ; ಜನರ ಸಮಸ್ಯೆ ಆಲಿಸಿ ಸಭಾಪತಿಗೆ ವರದಿ: ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್

ಹುಬ್ಬಳ್ಳಿ: ವಕ್ಫ್ ಬೋರ್ಡ್ ಆಸ್ತಿ ಕಬಳಿಸುವ ಆರೋಪ ಕೇಳಿಬಂದ ಹಿನ್ನೆಲೆ ಕರ್ನಾಟಕ ಜನರ ಸಮಸ್ಯೆಗಳ ಆಲಿಸಿ ಇದರ ವಿಸ್ತೃತ ವರದಿಯನ್ನು ಸಭಾಪತಿ ಅವರಿಗೆ ಸಲ್ಲಿಸಲಾಗುವುದು ಎಂದು ಕೇಂದ್ರ ವಕ್ಫ್ ಬೋರ್ಡ್ ಸಂಸದೀಯ ಜಂಟಿ ಸಮಿತಿಯ ಅಧ್ಯಕ್ಷ ಜಗದಂಬಿಕಾ ಪಾಲ್ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದ ತೇಜಸ್ವಿ ಸೂರ್ಯ ಅವರು ಕರ್ನಾಟಕದ ರೈತರು ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಕೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಆದ್ದರಿಂದ ಜನರ ಅಹವಾಲು ಸ್ವೀಕರಿಸಲು ಬಂದಿದ್ದೇನೆ ಎಂದರು.

ಉತ್ತರ ಕರ್ನಾಟಕ ಭಾಗದ ಸುಮಾರು 50-60 ವರ್ಷಗಳಿಂದ ಉಳಿಮೆ‌ ಮಾಡಿದ ಜಮೀನು, ಐತಿಹಾಸಿಕ ದೇವಸ್ಥಾನ ಕಬಳಿಸಲಾಗಿದೆ‌ ಎನ್ನಲಾಗುತ್ತಿದೆ. ಆದ್ದರಿಂದ ಹುಬ್ಬಳ್ಳಿ, ವಿಜಯಪುರ, ಬೀದರ ರೈತರ ಹಾಗೂ ಜನರ ಅಹವಾಲು ಸ್ವೀಕರಿಸುತ್ತೇನೆ. ಸದ್ಯ ಹುಬ್ಬಳ್ಳಿಯಲ್ಲಿ ಅದ್ವೈತ್ ಪರಿಷತ್ ಉತ್ತರ ಕರ್ನಾಟಕ ಹಾಗೂ ರತ್ನ ಭಾರತ ರೈತ ಸಮಾಜದವರು ಮನವಿ ಸಲ್ಲಿಸಿದ್ದು, ಇದನ್ನು ಪರಿಗಣಿಸಲಾಗುವುದು ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular