Friday, April 4, 2025
Google search engine

HomeUncategorizedರಾಷ್ಟ್ರೀಯರಾಜ್ಯಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡಿಸಿದ ಕಿರಣ್ ರಿಜಿಜು

ರಾಜ್ಯಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡಿಸಿದ ಕಿರಣ್ ರಿಜಿಜು

ನವದೆಹಲಿ: ಲೋಕಸಭೆ ಅಂಗೀಕಾರದ ನಂತರ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಗುರುವಾರ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿದರು.

ವಕ್ಫ್ ಮಂಡಳಿಗಳನ್ನು ಬಲಪಡಿಸುವ, ಮಹಿಳೆಯರು, ಮಕ್ಕಳು ಮತ್ತು ವಂಚಿತ ವರ್ಗಗಳ ಹಕ್ಕುಗಳನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ರಚಿಸಲಾಗಿದೆ ಎಂದು ಕಿರಣ್ ರಿಜಿಜು ಮಸೂದೆ ಮಂಡಿಸಿ ಹೇಳಿದರು.

ಬುಧವಾರ ತಡರಾತ್ರಿ ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿದ್ದು, 288 ಸದಸ್ಯರು ಇದರ ಪರವಾಗಿ ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದಾರೆ.

ಹೊಸ ಮಸೂದೆಯನ್ನು UMEED (ಏಕೀಕೃತ ವಕ್ಫ್ ನಿರ್ವಹಣೆ, ಮೌಲ್ಯವರ್ಧನೆ, ಕಾರ್ಯದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ) ಎಂದು ಕರೆಯಲಾಗುವುದು ಎಂದು ಕಿರಣ್‌ ರಿಜಿಜು ತಿಳಿಸಿದ್ದಾರೆ. ಇದನ್ನು ಒಳ್ಳೆಯ ಉದ್ದೇಶಕ್ಕೆ ಜಾರಿಗೆ ತರಲಾಗಿದೆ. ಯಾರಿಗೂ ಇದರಿಂದ ಸಮಸ್ಯೆ ಆಗಬಾರದು ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular