ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಏಪ್ರಿಲ್ 2ರಂದು ಲೋಕಸಭೆಯಲ್ಲಿ ಮಂಡಿಸಲು ನಿರ್ಧರಿಸಲಾಗಿದೆ. ಆಗಸ್ಟ್ 2024ರಲ್ಲಿ ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲಾದ ತಿದ್ದುಪಡಿ ಮಾಡಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ನಾಳೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಏ. 2ರಂದು ಲೋಕಸಭೆಯಲ್ಲಿ ಮಂಡಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಮಸೂದೆಗೆ ಈಗಾಗಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ಹಿರಿಯ ಬಿಜೆಪಿ ಸಚಿವರು ಇಂಡಿಯಾ ಬ್ಲಾಕ್ ನಾಯಕರೊಂದಿಗೆ ಚರ್ಚೆ ನಡೆಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಸಂಸತ್ತಿನ ಪ್ರಸ್ತುತ ಬಜೆಟ್ ಅಧಿವೇಶನ ಏಪ್ರಿಲ್ 4ರಂದು ಮುಕ್ತಾಯಗೊಳ್ಳಲಿದೆ. ಈ ಮಸೂದೆ ಜಾರಿಗೆ ಬರಲು ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಅಂಗೀಕರಿಸಬೇಕು. ಮುಸ್ಲಿಂ ಸಮುದಾಯದೊಳಗೆ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ಗೊತ್ತುಪಡಿಸಿದ ಆಸ್ತಿಗಳನ್ನು ನಿರ್ವಹಿಸುವ ವಕ್ಫ್ ಮಂಡಳಿಗಳ ಆಡಳಿತವನ್ನು ಪುನರ್ರಚಿಸಲು ಈ ಮಸೂದೆ ಪ್ರಸ್ತಾಪಿಸುತ್ತದೆ. ಈ ಪ್ರಸ್ತಾವನೆಯು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿರೋಧ ಪಕ್ಷದ ನಾಯಕರು ಇದನ್ನು ಅಸಂವಿಧಾನಿಕ ಮತ್ತು ಮುಸ್ಲಿಮರ ವಿರುದ್ಧ ಪಕ್ಷಪಾತಿ ಎಂದು ಟೀಕಿಸಿದ್ದಾರೆ.