Saturday, April 19, 2025
Google search engine

Homeರಾಜ್ಯವಕ್ಫ್ ಮಂಡಳಿ ನೋಟಿಸ್: ಕರ್ನಾಟಕ ರೈತರ ಅಹವಾಲು ಆಲಿಸಲು ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ...

ವಕ್ಫ್ ಮಂಡಳಿ ನೋಟಿಸ್: ಕರ್ನಾಟಕ ರೈತರ ಅಹವಾಲು ಆಲಿಸಲು ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ ಪತ್ರ

ಬೆಂಗಳೂರು : ಕರ್ನಾಟಕದಲ್ಲಿ ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್ ನೀಡಿರುವ ವಿಚಾರ ತೀವ್ರ ಚರ್ಚೆಗೆ ಮತ್ತು ಪ್ರತಿಭಟನೆಗೆ ಗ್ರಾಸವಾದ ಬೆನ್ನಲ್ಲೇ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆ ಬಗ್ಗೆ ಮಧ್ಯ ಪ್ರವೇಶಿಸಿದ್ದಾರೆ. ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್​​ಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ, ಸಮಿತಿಯ ಮುಂದೆ ಸಾಕ್ಷಿಗಳಾಗಿ ರೈತರ ನಿಯೋಗವನ್ನು ಆಹ್ವಾನಿಸಬೇಕೆಂದು ಮನವಿ ಮಾಡಿದ್ದಾರೆ.

ಈ ವಿಚಾರವಾಗಿ ತಾವು ಬರೆದಿರುವ ಪತ್ರ ಮತ್ತು ಅದಕ್ಕೆ ಸಂಬಂಧಿಸಿದ ವಿವರನ್ನು ತೇಜಸ್ವಿ ಸೂರ್ಯ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಜಿ ಅವರಿಗೆ ಪತ್ರ ಬರೆದು, ವಿಜಯಪುರ ಜಿಲ್ಲೆ ಮತ್ತು ಕರ್ನಾಟಕದ ಸುತ್ತಮುತ್ತಲಿನ ಇತರ ಪ್ರದೇಶಗಳ ರೈತರಿಗೆ ಅವರ ಭೂಮಿಯನ್ನು ವಕ್ಫ್ ಆಸ್ತಿ ಎಂದು ತಪ್ಪಾಗಿ ನೋಟಿಸ್ ನೀಡಿರುವುದರ ಬಗ್ಗೆ ಗಮನ ಸೆಳೆಯಲಾಗಿದೆ ಎಂದು ಎಕ್ಸ್​ ಸಂದೇಶದಲ್ಲಿ ತೇಜಸ್ವಿ ಸೂರ್ಯ ಉಲ್ಲೇಖಿಸಿದ್ದಾರೆ.

ರೈತರಿಗೆ ನೋಟಿಸ್‌ಗಳನ್ನು ನೀಡಿದ್ದರ ಹೊರತಾಗಿ, ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ಕೆಲವು ಜಮೀನುಗಳ ಆರ್‌ಟಿಸಿ, ಪಹಣಿ ಮತ್ತು ಮ್ಯುಟೇಶನ್ ರಿಜಿಸ್ಟರ್‌ಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಸಮಿತಿಯ ಮುಂದೆ ಸಾಕ್ಷಿಗಳಾಗಿ ಈ ರೈತರ ನಿಯೋಗವನ್ನು ಆಹ್ವಾನಿಸಲು ಮತ್ತು ಈ ಸಮಸ್ಯೆಯ ಪ್ರಮಾಣವನ್ನು ನೇರವಾಗಿ ಅರ್ಥಮಾಡಿಕೊಳ್ಳಲು ಮನವಿ ಮಾಡಲಾಗಿದೆ. ಅಷ್ಟೇ ಅಲ್ಲದೆ, ಸಾರ್ವಜನಿಕ ವಿಚಾರಣೆಗಾಗಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ವಕ್ಫ್ ಮಂಡಳಿ ರೈತರಿಗೆ ನೋಟಿಸ್ ನೀಡುತ್ತಿರುವ ವಿಚಾರ ಇದೀಗ ಬಹಳಷ್ಟು ಚರ್ಚೆಯಲ್ಲಿದೆ. ಈ ವಿದ್ಯಮಾನವು ರಾಜಕೀಯವಾಗಿಯೂ ಬಹಳಷ್ಟು ಚರ್ಚೆಗೆ ಗ್ರಾಸವಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಸಿಡಿದೆದ್ದಿದೆ. ಈವರೆಗೆ ವಿಜಯಪುರ, ಕಲಬುರಗಿ, ಧಾರವಾಡ ಜಿಲ್ಲೆಗಳ ರೈತರಿಗೆ ವಕ್ಫ್ ಮಂಡಳಿಯಿಂದ ನೋಟಿಸ್​ಗಳು ಬಂದಿವೆ. ಈ ಮಧ್ಯೆ, ಮಂಡ್ಯದಲ್ಲಿಯೂ ಎಕರೆಗಟ್ಟಲೆ ಗೋಮಾಳ ಜಮೀನನ್ನು ಮಸೀದಿಗೆ ಪಹಣಿ ಮಾಡುವಂತೆ ಮುಸ್ಲಿಮರು ಮನವಿ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿದೆ.

RELATED ARTICLES
- Advertisment -
Google search engine

Most Popular