ಮೈಸೂರು: ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಸಕ್ಕರೆ ಗ್ರಾಮದ ಬಳಿಯಿರುವ ಅಂಬೇಡ್ಕರ್ ವಸತಿ ಶಾಲೆಯ ಹಾಸ್ಟೆಲ್ ನ ವಾರ್ಡನ್, ವಿದ್ಯಾರ್ಥಿಗಳ ಕೈಯಲ್ಲೇ ಶುಚಿಗೊಳಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ವಸತಿ ಶಾಲೆಯನ್ನು ಸಂಪೂರ್ಣವಾಗಿ ವಿದ್ಯಾರ್ಥಿಗಳೇ ಶುಚಿಗೊಳಿಸಿದ್ದಾರೆ. ಸದ್ಯ ವಿದ್ಯಾರ್ಥಿಗಳು ಹಾಸ್ಟೆಲ್ ಅನ್ನು ಕ್ಲೀನ್ ಮಾಡುವ ವಿಡಿಯೋ ವೈರಲ್ ಆಗಿದೆ.
ಹಾಸ್ಟೆಲ್ ವಾರ್ಡನ್ ನ ಈ ಕೃತ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಹಾಸ್ಟೆಲ್ ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
