ಮದ್ದೂರು: ಮದ್ದೂರಮ್ಮ ದನಗಳ ಜಾತ್ರೆಯಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ಜಾತ್ರೆಯಲ್ಲಿ ಕುಡಿಯುವ ನೀರಿಲ್ಲದೆ ಜನ- ಜಾನುವಾರುಗಳು ಪರದಾಡಿವೆ.
ಪ್ರತಿ ವರ್ಷದಂತೆ ಮದ್ದೂರಮ್ಮನ ಜಾತ್ರೆ ಅದ್ದೂರಿಯಾಗಿ ನಡೆಯುತ್ತಿದ್ದು, ಸಾಂಪ್ರದಾಯಿಕವಾಗಿ ದನಗಳ ಜಾತ್ರೆ ಆರಂಭವಾಗಿದ್ದು, ಜಾತ್ರೆಯಲ್ಲಿ ಕಟ್ಟಿರುವ ದನಗಳಿಗೆ ನೀರಿನ ಸಮಸ್ಯೆ ಎದುರಾಗಿದೆ.

ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ಬಿಸಿಲಿನಲ್ಲೆ ರಾಸುಗಳು ನಿಂತಿವೆ. ಆದ್ದರಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ತಾಲ್ಲೂಕು ಆಡಳಿತಕ್ಕೆ ರೈತರು ಮನವಿ ಮಾಡಿದ್ದಾರೆ.