ಮಂಡ್ಯ: ಕೆರೆ ಕಟ್ಟೆಗಳನ್ನು ತುಂಬಿಸುವ ಸಲುವಾಗಿ ಹೇಮಾವತಿ ಜಲಾಶಯದಿಂದ ಕೆ.ಆರ್.ಪೇಟೆ ತಾಲೂಕಿನ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ಶಾಸಕ ಹೆಚ್.ಟಿ.ಮಂಜು ನೀರಾವರಿ ಅಧಿಕಾರಿಗಳೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಲುವೆಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿದ ಶಾಸಕರು, ನೀರು ಹರಿಯುವ ತನಕ ನೀರಾವರಿ ಇಲಾಖೆಯ ಅಧಿಕಾರಿಗಳು ತಾವೆ ಸ್ವತಃ ನಿಂತು ಕೆರೆ ಕಟ್ಟೆಗಳನ್ನು ತುಂಬಿಸುವಂತೆ ತಾಕೀತು ಮಾಡಿದರು.
ಸರಿಯಾದ ಪ್ರಮಾಣದಲ್ಲಿ ಕೆರೆ-ಕಟ್ಟೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.