ಮಂಡ್ಯ: ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವಿಕೆ ಕಾರ್ಯ ಮುಂದುವರೆದಿದ್ದು, 105 ಅಡಿಗೆ ಕೆ.ಆರ್.ಎಸ್ ಡ್ಯಾಂ ನೀರಿನ ಮಟ್ಟ ಕುಸಿತ ಕಂಡಿದೆ.
ದಿನೇ ದಿನೇ ನೀರಿನ ಮಟ್ಟ ಕುಸಿಯುತ್ತಿದ್ದರೂ ರಾಜ್ಯ ಸರ್ಕಾರ ಕೈಕಟ್ಟಿ ಕುಳಿತಿದ್ದು, ಕಾವೇರಿ ಒಡಲು ಬರಿದಾಗುವ ಆತಂಕ ಕಾವೇರಿ ಕೊಳ್ಳದ ರೈತರಿಗೆ ಕಾಡುತ್ತಿದೆ.
ತಮಿಳುನಾಡಿಗೆನೀರು ಹರಿಸುವುದನ್ನು ವಿರೋಧಿಸಿ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿ ಹಲವಡೆ ಪ್ರತಿಭಟನೆ ಮುಂದುವರೆದಿದ್ದು, ತಮಿಳು ನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸುವಂತೆ ಆಗ್ರಹಿಸಲಾಗಿದೆ.
ಹೋರಾಟದ ನಡುವೆಯು ಇಂದು ಕೂಡ ತಮಿಳುನಾಡಿಗೆ 12,631 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಡ್ಯಾಂನಿಂದ ಒಟ್ಟಾರೆ 15247 ಕ್ಯೂಸೆಕ್ ನೀರನ್ನು ಹೊರ ಹರಿಸಲಾಗುತ್ತಿದೆ.
ಕೆಆರ್ ಎಸ್ ಡ್ಯಾಂಗೆ 4983 ಕ್ಯೂಸೆಕ್ ಒಳಹರಿವಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ 105.70 ಅಡಿ ನೀರು ಸಂಗ್ರಹವಿದೆ. 49.542 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 27.617 ಟಿಎಂಸಿ ನೀರು ಮಾತ್ರ ಶೇಖರಣೆಯಾಗಿದೆ.
ಕೆಆರ್ ಎಸ್ ಡ್ಯಾಂ ನ ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿಗಳು
ಇಂದಿನ ಮಟ್ಟ – 105.70 ಅಡಿಗಳು
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 27.617 ಟಿಎಂಸಿ
ಒಳ ಹರಿವು – 4983 ಕ್ಯೂಸೆಕ್
ಹೊರ ಹರಿವು – 15,247 ಕ್ಯೂಸೆಕ್