Friday, April 18, 2025
Google search engine

Homeಅಪರಾಧವಯನಾಡು ದುರಂತ ಕೇರಳದಲ್ಲಿ ೨ ದಿನ ಶೋಕಾಚರಣೆ: ಸಿಎಂ ಪಿಣರಾಯಿ ಆದೇಶ

ವಯನಾಡು ದುರಂತ ಕೇರಳದಲ್ಲಿ ೨ ದಿನ ಶೋಕಾಚರಣೆ: ಸಿಎಂ ಪಿಣರಾಯಿ ಆದೇಶ

ತಿರುವನಂತಪುರ: ಕೇರಳದ ವಯನಾಡು ಸಮೀಪದ ಮೆಪ್ಪಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಎರಡು ದಿನಗಳ ಶೋಕಾಚರಣೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಮಂಗಳವಾರ ಆದೇಶಿಸಿದ್ದಾರೆ.

ಭಾರೀ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಈವರೆಗೂ ೮೪ ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ. ದುರಂತಕ್ಕೆ ತೀವ್ರ ಕಂಬನಿ ಮಿಡಿದಿರುವ ಮುಖ್ಯಮಂತ್ರಿ, ದುರಂತದಲ್ಲಿ ಹಲವರು ತಮ್ಮವರನ್ನು, ಮನೆ ಹಾಗೂ ಆಸ್ತಿಪಾಸ್ತಿಯನ್ನು ಕಳೆದುಕೊಂಡಿದ್ದಾರೆ. ಇದೊಂದು ದೊಡ್ಡ ದುರಂತ ಎಂದಿದ್ದಾರೆ.

ಶೋಕಾಚರಣೆಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿರುವ ಮುಖ್ಯ ಕಾರ್ಯದರ್ಶಿ ವಿ. ವೇಣು, ಇಂದು ಮತ್ತು ನಾಳೆ ರಾಜ್ಯದಲ್ಲಿ ಶೋಕಾಚರಣೆ ಜಾರಿಯಲ್ಲಿರುತ್ತದೆ. ರಾಷ್ಟ್ರಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಬೇಕು. ಸಾರ್ವಜನಿಕ ಸಭೆ ಹಾಗೂ ಸಮಾರಂಭಗಳನ್ನು ರದ್ದುಪಡಿಸಲಾಗಿದೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular