Friday, April 4, 2025
Google search engine

Homeರಾಜ್ಯಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ: ರಾಜು ಕಾಗೆ

ಬಸ್ ಟಿಕೆಟ್ ದರ ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ: ರಾಜು ಕಾಗೆ

ಬೆಳಗಾವಿ: ಕರ್ನಾಟಕ ಸರ್ಕಾರ ಶಕ್ತಿ ಯೋಜನೆ ಜಾರಿಗೆ ತಂದು ಒಂದು ವರ್ಷ ಕಳೆಯಿತು. ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಸಂಚರಿಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಗೆ ನಷ್ಟವಾಗಿದೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಹೆಚ್ಚಿಸುವ ಚಿಂತನೆಯಲ್ಲಿದ್ದೇವೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ರಾಜು ಕಾಗೆ ತಿಳಿಸಿದ್ದಾರೆ.

ಕಾಗವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ನಿಗಮ ನಷ್ಟದಲ್ಲಿದೆ. ಡೀಸೆಲ್ ಹಾಗೂ ಬಸ್ ನ ಬಿಡಿ ಭಾಗಗಳ ಬೆಲೆ ಕೂಡ ಹೆಚ್ಚಾಗಿದೆ. ಕಳೆದ ೧೦ ವರ್ಷಗಳಿಂದ ಬಸ್ ಟಿಕೆಟ್ ದರ ಏರಿಕೆ ಮಾಡಿಲ್ಲ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಆಸ್ತಿ ಪರಭಾರೆ ಮಾಡುತ್ತೇವೆ. ಸಂಸ್ಥೆಗೆ ಸೇರಿದ ಹಳೇ ಕಟ್ಟಡಗಳನ್ನು ನವೀಕರಿಸಿ ಬಾಡಿಗೆ ಕೊಡುತ್ತೇವೆ ಎಂದು ಹೇಳಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಪೆಟ್ರೋಲ್ ಬೆಲೆ ೩ ರೂ. ಮತ್ತು ಡಿಸೇಲ್ ಬೆಲೆ ೩.೫೦ ರೂಪಾಯಿ ಏರಿಕೆ ಮಾಡಿತ್ತು. ಇದರಿಂದ ರಾಜ್ಯದ ಜನರಿಗೆ ಆಘಾತ ಉಂಟಾಗಿತ್ತು. ಬಳಿಕ ಹಾಲಿನ ಬೆಲೆ ಏರಿಕೆಯಿಂದ ಜನ ಕಂಗ್ಗೆಟ್ಟಿದ್ದರು. ಇದೀಗ ಬಸ್ ಟಿಕೆಟ್ ದರ ಏರಿಕೆಯು ಜನರಿಗೆ ಸಂಕಷ್ಟ ತರಲಿದೆ.

RELATED ARTICLES
- Advertisment -
Google search engine

Most Popular