ಮೈಸೂರು: ರಾಜ್ಯದಲ್ಲಿನ ಪ್ರತಿಯೊಬ್ಬ ಜನರ ಪರ ಹಾಗೂ ಬಡ ಜನರ ಅಭಿವೃದ್ಧಿಗಾಗಿ ಕೆಲಸ ಮಾಡುವುದು ಜನಪ್ರತಿನಿಧಿಗಳ ಕರ್ತವ್ಯ. ಬಡ ಜನರಿಗೆ ನ್ಯಾಯ ದೊರಕಿಸುವಲ್ಲಿ ಯಾವುದೇ ರಾಜಿ ಇಲ್ಲ. ಹಾಗಾಗಿ ಅವಕಾಶಗಳಿಂದ ವಂಚಿತರಾದ ಬಡವರಿಗೆ ಶಕ್ತಿ ತುಂಬಲು ಗ್ಯಾರಂಟಿ ಯೋಜನೆಗಳನ್ನು ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ಇಂದು ತಿ.ನರಸೀಪುರ-ನಂಜನಗೂಡು ರಸ್ತೆಯಲ್ಲಿರುವ ತಾಯೂರು ಗೇಟ್ ಬಳಿ ಆಯೋಜಿಸಲಾಗಿದ್ದ, ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ವರುಣಾ ಕ್ಷೇತ್ರದ ಅಭಿವೃದ್ಧಿ ೫೦೧.೮೧ ಕೋಟಿ ಮೌಲ್ಯದ ಅನುದಾನ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದು ಇಲ್ಲಿಗೆ ಅಂತಿಮಗೊಳ್ಳದೆ ಮುಂದಿನ ದಿನಗಳಲ್ಲಿ ಉಳಿದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಇಡೀ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿಯ ಅಭಿವೃದ್ಧಿ ನಮ್ಮ ಸರ್ಕಾರದ ಗುರಿಯಾಗಿದ್ದು, ಈ ನಿಟ್ಟಿನಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಿ ಶೀಘ್ರದಲ್ಲಿಯೇ ಎಲ್ಲಾ ಜಿಲ್ಲೆಗಳಿಗೂ ಅನುದಾನವನ್ನು ನೀಡಲಾಗುವುದು. ವರುಣಾ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಅನುದಾನ ನೀಡಲಾಗುತ್ತಿದೆ. ಇದು ಸರ್ಕಾರ ಮಾಡುವ ಉಪಕಾರವಲ್ಲ ಬದಲಾಗಿ ಜನಪ್ರತಿನಿಧಿಯಾಗಿ ಅಭಿವೃದ್ಧಿ ಮಾಡುವ ನಮ್ಮ ಜವಾಬ್ದಾರಿಯಾಗಿರುತ್ತದೆ. ಇದನ್ನು ಪ್ರಾಮಾಣಿಕವಾಗಿ ನಿಭಾಯಿಸುವುದು ನಮ್ಮ ಕರ್ತವ್ಯ ಎಂದರು.
ರಾಜ್ಯದಲ್ಲಿನ ಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವುದು, ಅವಕಾಶದಿಂದ ವಂಚಿತರಾಗಿರುವ ಜನರನ್ನು ಮುಖ್ಯವಾಹಿನಿಗೆ ತರಬೇಕೆಂಬುದು ನಮ್ಮ ಸರ್ಕಾರದ ಉದ್ದೇಶ. ಈ ನಿಟ್ಟಿನಲ್ಲಿ ಇಂದಿರಾ ಕ್ಯಾಂಟೀನ್, ವಿದ್ಯಾಸಿರಿ, ಶಾದಿ ಭಾಗ್ಯ, ಶೂ ಭಾಗ್ಯ ಹಾಗೂ ಮನಸ್ವಿನಿ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ ಉಪಯೋಗವಾಗುವಂತೆ ಮಾಡಿದ್ದೇವೆ ಎಂದು ಹೇಳಿದರು.
ಚುನಾವಣೆಯ ಪೂರ್ವದಲ್ಲಿ ಹೇಳಿದಂತೆ ಗ್ಯಾರಂಟಿಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ. ಈ ಯೋಜನೆಗಳಿಗೆ ಹಲವಾರು ಟೀಕೆ-ಟಿಪ್ಪಣಿಗಳು ಕೇಳಿಬಂದರು ಇಂದು ರಾಜ್ಯದ ಜನತೆಯ ಪ್ರತಿಕ್ರಿಯೆ ಹಾಗೂ ಗ್ಯಾರಂಟಿ ಯೋಜನೆಗಳಿಂದ ಅವರು ಬದುಕು ಕಟ್ಟಿಕೊಂಡ ಉದಾಹರಣೆಗಳು ಟೀಕೆಗಳನ್ನು ಮುಚ್ಚಿಹಾಕಿವೆ. ಇದರಿಂದಲೇ ನಮ್ಮ ಸರ್ಕಾರ ಜನಪರ ಸರ್ಕಾರ ಎಂದು ತಿಳಿಯಬಹುದಾಗಿದೆ ಎಂದು ಹೇಳಿದರು.
ಅಂಬೇಡ್ಕರ್ ಅವರು ಎಂದೂ ಪ್ರತಿಯೊಬ್ಬ ವ್ಯಕ್ತಿಯು ಅವಕಾಶಗಳನ್ನು ಸಮಾನವಾಗಿ ಪಡೆಯುತ್ತಾನೆಯೋ ಅಂದು ನಮಗೆ ನಿಜವಾದ ಸ್ವತಂತ್ರ್ಯ ಸಿಗುತ್ತದೆ ಎಂದು ಹೇಳಿದ್ದರು. ಆ ಮಾತಿನಂತೆ ಇಂದು ನಮ್ಮ ಸರ್ಕಾರ ಸಮ ಸಮಾಜವನ್ನು ನಿರ್ಮಾಣ ಮಾಡಲು ಹೊರಟಿದೆ. ಅದಕ್ಕೆ ರಾಜ್ಯದ ಪ್ರತಿಯೊಬ್ಬರ ಸಹಕಾರ ಬಹಳ ಮುಖ್ಯ. ಇಡೀ ದೇಶದಲ್ಲಿಯೇ ಕರ್ನಾಟಕವನ್ನು ಅಭಿವೃದ್ಧಿಯಲ್ಲಿ ಪ್ರಥಮ ಸ್ಥಾನಕ್ಕೆ ತರಬೇಕು ಅದಕ್ಕೆ ಜನರು ಕೈಜೋಡಿಸಬೇಕು ಎಂದು ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪನವರು ಮಾತನಾಡಿ, ಇಂದು ೫೦೧.೮೧ ಕೋಟಿ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದೆ. ವರುಣ ಕ್ಷೇತ್ರಕ್ಕೆ ಇದೇ ಮೊದಲ ಬಾರಿ ಅಲ್ಲದೆ, ಕಳೆದ ಬಾರಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯನವರು ಸುಮಾರು ೨ ಸಾವಿರ ಕೋಟಿ ಅನುದಾನ ನೀಡಿದ್ದರು. ಒಟ್ಟಾರೆಯಾಗಿ ಮುಖ್ಯಮಂತ್ರಿಗಳ ಸ್ವ ಕ್ಷೇತ್ರಕ್ಕೆ ಸುಮಾರು ೩೦೪೫ ಸಾವಿರ ಕೋಟಿ ಅನುದಾನವನ್ನು ನೀಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ ಎಂದು ತಿಳಿಸಿದರು.
ಅಂಬೇಡ್ಕರ್, ಗಾಂಧೀಜಿ ಹಾಗೂ ಕುವೆಂಪು ಅವರ ನಡೆಯಂತೆ ಧ್ವನಿ ಇಲ್ಲದವರ ಧ್ವನಿಯಾಗಿ ಇಂದು ನಮ್ಮ ಸರ್ಕಾರ ನಡೆಯುತ್ತಿದೆ. ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ಸಮ ಸಮಾಜವನ್ನು ನಿರ್ಮಿಸಿ, ಪ್ರತಿಯೊಬ್ಬ ವ್ಯಕ್ತಿಯು ಯಾವುದೇ ಸೌಲಭ್ಯದಿಂದ ವಂಚಿತರಾಗದಂತೆ ಮಾಡುವುದೇ ಸರ್ಕಾರದ ಉದ್ದೇಶ ಎಂದು ಹೇಳಿದರು.
ಇಂದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಪ್ರತಿಯೊಂದು ಕುಟುಂಬವು ಪ್ರತ್ಯಕ್ಷವಾಗಿ ಮಾಸಿಕ ಆದಾಯ ಇಲ್ಲದ ಕುಟುಂಬಗಳು ೫ ಸಾವಿರ ರೂ. ಗಳನ್ನು ಪಡೆದುಕೊಳ್ಳುತ್ತಿದೆ. ಇದು ರಾಜಕೀಯ, ಜಾತಿ, ಧರ್ಮ ಹಾಗೂ ಜನಾಂಗವನ್ನು ಬಿಟ್ಟು ಮಾಡಿರುವಂತಹ ಮಹತ್ ಕಾರ್ಯವಾಗಿದ್ದು, ಪ್ರಾಮಾಣಿಕತೆಯಿಂದ ನೈತಿಕತೆಯಿಂದ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಕೆಲಸವನ್ನು ಸಿದ್ದರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಮಾಡುತ್ತಿದೆ ಎಂದರು.
ಪಶು ಸಂಗೋಪನೆ ಮತ್ತು ರೇ? ಇಲಾಖೆಯ ಸಚಿವರಾದ ಕೆ.ವೆಂಕಟೇಶ್ ಅವರು ಮಾತನಾಡಿ, ಇಂದು ೫೦೦ ಕೋಟಿಗೂ ಹೆಚ್ಚಿನ ಅನುದಾನದಲ್ಲಿ ೬ ವಿವಿಧ ಇಲಾಖೆಗಳ ಅಭಿವೃದ್ದಿ ಕಾಮಗಾರಿಗಳಿಗೆ ಶಂಕು ಸ್ಥಾಪನೆಯಾಗಿರುವುದು ಕ್ಷೇತ್ರದಲ್ಲಿ ಅಭಿವೃದ್ಧಿಯ ಹಬ್ಬವನ್ನು ಸೃಷ್ಟಿಮಾಡಿದೆ. ಇದರಿಂದಲೇ ನಮ್ಮ ಸರ್ಕಾರ ಜನ ಸಾಮಾನ್ಯರಿಗೆ ಯಾವುದೇ ಕೊರತೆ ನೀಡದಂತೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತಿರುವುದನ್ನು ತಿಳಿಯಬಹುದಾಗಿದೆ ಎಂದು ಹೇಳಿದರು.
ಬಡಜನರು, ರೈತರು ಹಾಗೂ ಮಹಿಳೆಯರಿಗಾಗಿ ವಿವಿಧ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅದರ ಮುಂದುವರೆದ ಭಾಗವಾಗಿ ಇಂದು ಆಸಕ್ತ ಮಹಿಳೆಯರಿಗೆ ನಾಟಿಕೋಳಿಗಳನ್ನು ವಿತರಿಸಲಾಗುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಂಡು ಸಂತಾನೋತ್ಪತ್ತಿಯನ್ನು ಹೆಚ್ಚಿಸಿ ಅವುಗಳಿಂದ ಲಾಭ ಪಡೆಯಬಹುದಾಗಿದೆ. ಇದು ವರುಣಾ ಕ್ಷೇತ್ರದ ೨೦೦೦ ಮಹಿಳೆಯರಿಗೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕ್ಷೇತ್ರದ ಮಹಿಳೆಯರಿಗೆ ಈ ಯೋಜನೆ ತಲುಪಲಿದೆ ಎಂದು ತಿಳಿಸಿದರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ಅವರು ಮಾತನಾಡಿ, ೫೦೦ ಕೋಟಿಗೂ ಹೆಚ್ಚಿನ ಅನುದಾನದ ಶಂಕುಸ್ಥಾಪನೆ ಇಂದು ನೆರವೇರಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಈ ರೀತಿಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದರು.
೫೬ ಸಾವಿರ ಕೋಟಿ ವೆಚ್ಚದಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಮಾಡಲಾಗಿದ್ದು, ಇಂದು ಯೋಜನೆಗಳ ಪ್ರಯೋಜನವನ್ನು ರಾಜ್ಯದ ಪ್ರತಿಯೊಂದು ಕುಂಟುಂಬವು ಪಡೆದುಕೊಳ್ಳುತ್ತಿದೆ. ಇದರಿಂದಲೇ ರೈತರ, ಬಡವರ ಮತ್ತು ಮಹಿಳೆಯರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಯಬಹುದಾಗಿದೆ ಎಂದರು.
ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಮಾತನಾಡಿ, ರಾಜ್ಯದಲ್ಲಿ ಪುರಸಭೆಯಲ್ಲಿ ಸುಮಾರು ವ?ಗಳಿಂದಲೂ ಅನೇಕ ಸಮಸ್ಯೆಗಳಿತ್ತು. ಇಂದು ನಮ್ಮ ಸಿದ್ಧರಾಮಯ್ಯನವರ ಸರ್ಕಾರ ರಾಜ್ಯದ ಎಲ್ಲಾ ಟಿಎಂಸಿ, ಸಿಎಂಸಿ ೧೦ ಸಾವಿರ ಕೋಟಿ ತೆರಿಗೆ ಹಣ ಸಂಗ್ರಹವಾಗುತ್ತಿದೆ. ಬೇರೆ ಸರ್ಕಾರ ಅಧಿಕಾರಲ್ಲಿದ್ದಾಗ ಜನರಿಗೆ ಮನೆ ಕೊಟ್ಟಿಲ್ಲ. ಇಂದು ನಮ್ಮ ಸರ್ಕಾರ ಬಡಜನರಿಗೆ ಮನೆ ಭಾಗ್ಯ, ಕುಡಿಯುವ ನೀರು, ವಿದ್ಯುತ್, ರಸ್ತೆ ಇನ್ನೂ ಮುಂತಾದ ಸಮಸ್ಯೆಗಳನ್ನು ಬಗೆಹರಿಸುತ್ತಿದೆ. ಬಡ ಜನರ ಹಸಿವನ್ನು ನೀಗಿಸುವ ಸಲುವಾಗಿ ೨೦೦ ಹೊಸ ಇಂದಿರಾ ಕ್ಯಾಂಟೀನ್ ಅನ್ನು ನಿರ್ಮಾಣ ಮಾಡಿದೆ. ೨೦೨೩ ವಿಧಾನ ಸಭಾ ಚುನಾವಣೆಯಲ್ಲಿ ರಲ್ಲಿ ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಕೊಟ್ಟಂತಹ ಪಂಚ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೆ ತಂದಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುಮಾರು ೫೦೧.೮೧ ಕೋಟಿ ಮೌಲ್ಯದ ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾಮಗಾರಿಗಳಿಗೆ ಚಾಲನೆ ಹಾಗೂ ತಿ.ನರಸೀಪುರ ಪುರಸಭೆಯ ನೂತನ ಕಚೇರಿ ಮತ್ತು ನಗರ್ಲೆ ಗ್ರಾಮ ಪಂಚಾಯಿತಿಯ ಎನ್.ಆರ್.ಎಲ್.ಎಂ ಕಟ್ಟಡಗಳ ಉದ್ಘಾಟನೆ ಮಾಡಿದರು.
ಪಲಾನುಭವಿಗಳಿಗೆ ಸವಲತ್ತಗಳನ್ನು ವಿತರಿಸಲಾಯಿತು. ಪಶು ಸಂಗೋಪನೆ ಮತ್ತು ಪಶು ವೈದ್ಯ ಇಲಾಖೆಯ ವತಿಯಿಂದ ೬ನೇ ಹಂತದ ಕಾಲುಬಾಯಿ ರೋಗ ಲಸಿಕೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನು?ನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪು? ಅಮರನಾಥ್, ಕೃ?ರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್ ಹಾಗೂ ವಿಧಾನ ಪರಿ?ತ್ ಸದಸ್ಯರುಗಳಾದ ಡಾ.ಡಿ.ತಿಮ್ಮಯ್ಯ, ಯತಿಂದ್ರ.ಎಸ್, ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ. ಗಾಯತ್ರಿ, ಜಿಲ್ಲಾ ಪೋಲಿಸ್ ವರಿ?ಧಿಕಾರಿಯಾದ ವಿ?ವರ್ಧನ್ ಎನ್, ವರುಣಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.