Monday, December 22, 2025
Google search engine

Homeರಾಜಕೀಯನಾವು ಯಾರನ್ನೂ ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

ನಾವು ಯಾರನ್ನೂ ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ – 2025’ಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಈ ವಿಷಯವನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಮತ್ತು ಈ ಮಸೂದೆಯು ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ಗುರಿಯಾಗಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಪ್ರತಿಕ್ರಿಯಿಸಿದ್ದಾರೆ.

ನಾವು ಯಾರನ್ನೂ ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ಈ ಮಸೂದೆಯನ್ನು ತಂದಿಲ್ಲ. ದ್ವೇಷ ಭಾಷಣ ಮಾಡುವ ಯಾರಿಗಾದರೂ ಇದು ಅನ್ವಯಿಸುತ್ತದೆ. ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇದನ್ನು ಪರಿಚಯಿಸಲಾಗಿಲ್ಲ. ಕಾನೂನನ್ನು ಗೌರವಿಸಬೇಕು. ದ್ವೇಷ ಭಾಷಣವನ್ನು ನಿಗ್ರಹಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೊಲೆಗಳು ಸೇರಿದಂತೆ ಅನೇಕ ಘಟನೆಗಳು ನಡೆದಿವೆ. ಇದೆಲ್ಲವನ್ನೂ ನಿಲ್ಲಿಸಬೇಕು. ಬಿಜೆಪಿಯನ್ನು ಗಮನದಲ್ಲಿಟ್ಟುಕೊಂಡು ಈ ಮಸೂದೆಯನ್ನು ತಂದಿಲ್ಲ ಎಂದು ತಿಳಿಸಿದರು.

ಇನ್ನೂ ಬಿಜೆಪಿ ಇದರ ಮೇಲೆ ರಾಜಕೀಯ ಮಾಡಲು ಪ್ರಯತ್ನಿಸುತ್ತಿದೆ ಮಸೂದೆಯನ್ನು ಅಧಿವೇಶನದಲ್ಲಿ ಅಂಗೀಕರಿಸಲಾಗಿದೆ. ನಾವು ಮಸೂದೆಯನ್ನು ರಾಜ್ಯಪಾಲರಿಗೆ ಕಳುಹಿಸುತ್ತೇವೆ. ರಾಜ್ಯಪಾಲರು ಮಸೂದೆಯ ಕುರಿತು ಸ್ಪಷ್ಟೀಕರಣವನ್ನು ಕೋರಿದರೆ, ನಾವು ವಿವರಣೆಯನ್ನು ನೀಡುತ್ತೇವೆ ಎಂದು ಹೇಳಿದರು. ಧರ್ಮ, ಜನಾಂಗ, ಭಾಷೆ, ಜನ್ಮಸ್ಥಳ, ಜಾತಿ, ಲಿಂಗದ ಆಧಾರದಲ್ಲಿ ದ್ವೇಷದ ಭಾಷಣ ಮಾಡುವವರನ್ನು ನಿರ್ಬಂಧಿಸಲು ರಾಜ್ಯ ಸರ್ಕಾರವು, ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದೆ. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ – 2025 ಅನ್ನು ಡಿಸೆಂಬರ್ 18 ರಂದು ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತು ಅಂಗೀಕರಿಸಿದೆ.

ಬೆಳಗಾವಿಯ ವಿಧಾನಸಭೆಯಲ್ಲಿ ಈ ಮಸೂದೆಯನ್ನು ಚರ್ಚೆಗೆ ಕೈಗೆತ್ತಿಕೊಳ್ಳಲಾಯಿತು. ಅಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು ಅದರ ಕಾಯ್ದೆಯ ನಿಬಂಧನೆಗಳನ್ನು ವಿವರಿಸಿದರು ಮತ್ತು ಕಾನೂನು ಚೌಕಟ್ಟಿನೊಳಗೆ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸುವ ಅಗತ್ಯವನ್ನು ವಿವರಿಸಿದ್ದು, ಈ ಕಾಯ್ದೆಯ ಅನ್ವಯ ದ್ವೇಷಾಪರಾಧ ಎಸಗಿದವರಿಗೆ ಒಂದು ವರ್ಷದಿಂದ ಏಳು ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಇದೇ ಮುಂದುವರಿದರೆ, 2 ವರ್ಷದಿಂದ 10 ವರ್ಷದವರೆಗೆ ಜೈಲು ಶಿಕ್ಷೆ ನೀಡಲಾಗುತ್ತದೆ ಹಾಗೂ 50 ಸಾವಿರದಿಂದ ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular